KARNATAKA
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿರ ಎಂದು ಅಪೊಲೊ ಆಸ್ಪತ್ರೆ ಪ್ರಕಟಣೆ

ಬೆಂಗಳೂರು, ಆಗಸ್ಟ್ 30: ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಈ ಹಿನ್ನೆಲೆ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಮಂಗಳವಾರ ತಡರಾತ್ರಿ ಬನ್ನೇರುಘಟ್ಟ ರಸ್ತೆಯ ಅಪೊಲೊ ಆಸ್ಪತ್ರೆಯ ನರ ವಿಭಾಗಕ್ಕೆ ಅವರನ್ನು ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿರವಾಗಿದ್ದು, ಅವರ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಲಾಗಿದೆ ಎಂದು ಜಯನಗರದ ಅಪೊಲೊ ಆಸ್ಪತ್ರೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಬಳಲಿಕೆ ಮತ್ತು ಅಸ್ವಸ್ಥೆತೆಯಿಂದ ಬೆಳಗಿನ ಜಾವ 3.40ರ ಸುಮಾರಿಗೆ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾದರು. ಕೂಡಲೇ ತಪಾಸಣೆ ನಡೆಸಿ, ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆಗೆ ಕುಮಾರಸ್ವಾಮಿ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ.
ಸದ್ಯ, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಈ ಸಂಬಂಧ ಕಾಲ ಕಾಲಕ್ಕೆ ಮಾಹಿತಿ ನೀಡಲಾಗುವುದು ಎಂದೂ ತಿಳಿಸಲಾಗಿದೆ.