Connect with us

FILM

ಮಾಜಿ ಸಿಎಂ ‘ಹೆಚ್.ಡಿ.ಕೆ.’ ವಿರುದ್ಧ ವಾಗ್ದಾಳಿ ಹಿನ್ನೆಲೆ : ರಾಕ್ ಲೈನ್ ಮನೆಗೆ ಜೆಡಿಎಸ್ ಕಾರ್ಯಕರ್ತರ ಮುತ್ತಿಗೆ

ಬೆಂಗಳೂರು, ಜುಲೈ 10: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಮಾತನಾಡಿದ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಕುಮಾರಸ್ವಾಮಿಯವರ ಬಗ್ಗೆ ಮಾತನಾಡಲು ರಾಕ್ ಲೈನ್ ವೆಂಕಟೇಶ್ ಗೆ ಯೋಗ್ಯತೆ ಇಲ್ಲ. ಕುಮಾರಸ್ವಾಮಿ ಏಕವಚನದಲ್ಲಿ ಮಾತನಾಡಿದ ಅವರು ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ಮಹಾಲಕ್ಷ್ಮಿಲೇಔಟ್ ನಲ್ಲಿರುವ ರಾಕ್ ಲೈನ್ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ.

ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾದ ಹಿನ್ನೆಲೆಯಲ್ಲಿ ಭಾರೀ ಸಂಖ್ಯೆಯ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಹೆಚ್.ಡಿ.ಕೆ. ವಿರುದ್ಧ ಮಾತನಾಡಿದ್ದನ್ನು ವಿರೋಧಿಸಿದ ಜೆಡಿಎಸ್ ಕಾರ್ಯಕರ್ತರು, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆ ರಾಕ್ ಲೈನ್ ವೆಂಕಟೇಶ್ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ಕೈಗೊಂಡಿದ್ದಾರೆ. ರಾಕ್ಲೈನ್ ನಿವಾಸಕ್ಕೆ ಮುತ್ತಿಗೆ ಹಾಕಿ ಬ್ಯಾರಿಕೇಡ್ ತಳ್ಳಿ ನುಗ್ಗಲು ಯತ್ನಿಸಿದ್ದು, ಪೊಲೀಸರು ತಡೆದಿದ್ದಾರೆ. ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.