DAKSHINA KANNADA
ಟಿಕೆಟ್ ಸಿಗದ ಬೇಸರ, ಚುನಾವಣಾ ರಾಜಕೀಯದಿಂದ ಮಾಜಿ ಸಿಎಂ ವೀರಪ್ಪ ಮೊಯ್ಲಿ ನಿವೃತ್ತಿ..!
ಚಿಕ್ಕಬಳ್ಳಾಪುರ : ಟಿಕೆಟ್ ಸಿಗ ಹಿನ್ನೆಲೆಯಲ್ಲಿ ಹತಾಶೆಗೊಂಡು ಮಾಜಿ ಸಿಎಂ ಕಾಂಗ್ರೆಸ್ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.ಆದರೆ ಈ ಬಾರಿ ಹೈಕಮಾಂಡ್ ಕೊನೆ ಕ್ಷಣದಲ್ಲಿ ಯುವ ನಾಯಕರ ರಕ್ಷಾ ರಾಮಯ್ಯ ಅವರಿಗೆ ನೀಡಿದೆ.ಇದರಿಂದ ನಿರಾಶೆಗೊಂಡ ವೀರಪ್ಪ ಮೊಯ್ಲಿಅಂತಿಮವಾಗಿ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಕರ್ನಾಟಕದ ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಯಾಗಿ,ಕೇಂದ್ರ ಸಚಿವರಾಗಿ ಅವಕಾಶ ಪಡೆದಿದ್ದು ಇದೀಗ ಕಾಂಗ್ರೆಸ್ ಯುವನಾಯಕರಿಗೆ ಟಿಕೆಟ್ ನೀಡಿದ ಪರಿಣಾಮ ಬೇಸರಗೊಂಡು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆಂದು ತಿಳಿದುಬಂದಿದೆ.
You must be logged in to post a comment Login