Connect with us

LATEST NEWS

ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ನಿಧನ

ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ನಿಧನ

ನವದೆಹಲಿ ಜುಲೈ 20: ಕಾಂಗ್ರೇಸ್ ನ ಹಿರಿಯ ನಾಯಕಿ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ ವಿಧಿವಶರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ದೆಹಲಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ದೀರ್ಫಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು, ಇಂದು ತೀವ್ರ ಅನಾರೋಗ್ಯದ ಹಿನ್ನಲೆಯಲ್ಲಿ ಅವರನ್ನು ದೆಹಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಕಾಂಗ್ರೇಸ್ ನ ಹಿರಿಯ ನಾಯಕಿಯಾಗಿರುವ ಅವರು 1998 ರಿಂದ 2013ರ ವರೆಗೆ ದೆಹಲಿ ಮುಖ್ಯಮಂತ್ರಿಯಾಗಿದ್ದರು.
2014ರಲ್ಲಿ ಕೇರಳಾ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಅವರು 2019ರ ಜನವರಿಯಲ್ಲಿ ದೆಹಲಿ ಪ್ರದೇಶ ಕಾಂಗ್ರೆಸ್‌ ಸಮಿತಿಯ(ಡಿಪಿಸಿಸಿ) ನೂತನ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದರು.

81ನೇ ವಯಸ್ಸಿನಲ್ಲಿ ದೆಹಲಿ ಈಶಾನ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುವ ಮೂಲಕ ಶೀಲಾ ದೀಕ್ಷಿತ್‌ ಒಮ್ಮೆಲೇ ರಾಷ್ಟ್ರದ ಗಮನ ಸೆಳೆದಿದ್ದರು.

Facebook Comments

comments