Connect with us

LATEST NEWS

ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ನಿಧನ

ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ನಿಧನ

ನವದೆಹಲಿ ಅಗಸ್ಟ್ 24: ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅನಾರೋಗ್ಯದ ಹಿನ್ನಲೆಯಲ್ಲಿ ಇದು ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಅರುಣ್ ಜೆಟ್ಲಿ ಅವರಿಗೆ ಕಳೆದ ಕೆಲವು ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ದೆಹಲಿಯ ಏಮ್ಸ್ ನಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

66 ವರ್ಷದ ಅರುಣ್ ಜೇಟ್ಲಿ ಈ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಅಮೆರಿಕಾಗೆ ತೆರಳಿ ಕ್ಯಾನ್ಸರ್ ಚಿಕಿತ್ಸೆ ಪಡೆದುಕೊಂಡಿದ್ದರು.
ಇತ್ತೀಚೆಗೆ ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾದ ಹಿನ್ನಲೆಯಲ್ಲಿ ಆಗಸ್ಟ್ 9 ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.

66 ವರ್ಷದ ಅರುಣ್ ಜೇಟ್ಲಿ ಅವರನ್ನು ನೆಫ್ರಾಲಜಿಸ್ಟ್, ಹೃದ್ರೋಗ ತಜ್ಞರು ತಪಾಸಣೆ ಮಾಡಿದ್ದರು. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಕೇಂದ್ರ ಆರೋಗ್ಯ ಸಚಿವ ಹರ್ಷವಧನ್, ಗೃಹ ಸಚಿವ ಅಮಿತ್ ಶಾ ಅವರು ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಶುಕ್ರವಾರ (ಆಗಸ್ಟ್ 16) ರಾತ್ರಿ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ ಆಸ್ಪತ್ರೆಗೆ ತೆರಳಿ ಅರುಣ್ ಜೇಟ್ಲಿಯವರ ಆರೋಗ್ಯ ವಿಚಾರಿಸಿದ್ದರು.

Facebook Comments

comments