Connect with us

LATEST NEWS

ಭಾರತೀಯ ಕ್ರಿಕೆಟ್ ತಂಡದ ಸ್ಪಿನ್ ದಂತಕತೆ ಬಿಶನ್ ಸಿಂಗ್ ಬೇಡಿ ಇನ್ನಿಲ್ಲ

ನವದೆಹಲಿ ಅಕ್ಟೋಬರ್ 23: ಭಾರತೀಯ ಕ್ರಿಕೆಟ್ ತಂಡದ ಅತ್ಯಂತ ಜನಪ್ರಿಯ ಸ್ಪಿನ್ ಬೌಲರ್ ಮಾಜಿ ನಾಯಕ ಬಿಶನ್ ಸಿಂಗ್ ಬೇಡಿ ನಿಧನರಾಗಿದ್ದಾರೆ.


ಇವರು 1967 ಮತ್ತು 1979 ರ ನಡುವಿನ 12 ವರ್ಷಗಳ ವೃತ್ತಿಜೀವನದಲ್ಲಿ 67 ಟೆಸ್ಟ್‌ಗಳ ಪಂದ್ಯಗಳನ್ನು ಆಡಿದ್ದಾರೆ. ಬಿಶನ್‌ ಸಿಂಗ್‌ ಅವರು ಭಾರತದ ಅತ್ಯಂತ ಪ್ರಸಿದ್ಧ ಕ್ರಿಕೆಟಿಗರಲ್ಲಿ ಒಬ್ಬರಾಗಿದ್ದಾರೆ. ಎರಪಳ್ಳಿ ಪ್ರಸನ್ನ, ಬಿ.ಎಸ್ ಚಂದ್ರಶೇಖರ್ ಮತ್ತು ಎಸ್. ವೆಂಕಟರಾಘವನ್ ಅವರೊಂದಿಗೆ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸ್ಪಿನ್ ಕ್ವಾರ್ಟೆಟ್ ಅನ್ನು ರಚಿಸಿ, ವಿಶ್ವಾದ್ಯಂತ ಸ್ಪಿನ್ ಬೌಲಿಂಗ್ ಕಲೆಯ ಕ್ರಾಂತಿಗೆ ನಾಂದಿ ಹಾಡಿದ್ದಾರೆ. ಅಮೃತಸರ ಮೂಲದವರಾದ ಇವರು ಭಾರತದ ಮೊದಲ ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್‌ ಪಂದ್ಯದ (ODI) ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *