Connect with us

    LATEST NEWS

    ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರ್ಪಡೆ

    ನವದೆಹಲಿ: ಕರ್ನಾಟಕ ಸಿಂಗಂ ಖ್ಯಾತಿಯ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅಧಿಖೃತವಾಗಿ ರಾಜಕೀಯ ಪ್ರವೇಶ ಮಾಡಿದ್ದಾರೆ. ಭಾರತೀಯ ಜನತಾ ಪಕ್ಷವನ್ನು ಅವರು ತನ್ನ ರಾಜಕೀಯ ಸೇವೆಗೆ ಆಯ್ಕೆ ಮಾಡಿದ್ದು ಇಂದು ನವದೆಹಲಿಯ ಕೇಂದ್ರ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

    ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಯಾಗಲಿದ್ದು, ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಐಪಿಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಕಾರ್ಯನಿರ್ವಹಿಸಿದ್ದ ಅಣ್ಣಾಮಲೈ, ತಮ್ಮ ಖಡಕ್ ನಿರ್ಧಾರಗಳು ಮತ್ತು ಅಡಳಿತದಿಂದ ‘ಸಿಂಗಂ’ ಎಂಬ ಹೆಸರು ಪಡೆದುಕೊಂಡಿದ್ದರು. ನಂತರ 2019ರಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ತಮ್ಮ ಸ್ವಂತ ಊರು ತಮಿಳುನಾಡಿಗೆ ಹೋಗಿದ್ದರು. ಈಗ ಸ್ವಂತ ಊರಿನಲ್ಲೇ ಇದ್ದು, ಅಲ್ಲೇ ಕೆಲಸ ಮಾಡಿ 2021ರ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದರು.


    ಈ ಮೊದಲು ಅವರು ತಮಿಳುನಾಡಿನ ನಟ ರಜಿನಿಕಾಂತ್ ಅವರ ಪಕ್ಷದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ ಬಿಜೆಪಿ ಸೇರ್ಪಡೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ನನ್ನ ಪ್ರಕಾರ ಐಪಿಎಸ್ ಎಂದರೆ ದೇಶ, ರಾಷ್ಟ್ರೀಯ ಭದ್ರತೆ. ನಾನು ಅಧಿಕಾರಿಯಾಗಿದ್ದೆ. ಅದೇ ನಿಟ್ಟಿನಲ್ಲಿ ತಮಿಳುನಾಡಿಗೆ ಈಗ ಪರ್ಯಾಯ ಆಡಳಿತದ ಅಗತ್ಯವಿದೆ. ಆ ಮಾರ್ಗವನ್ನು ಬಿಜೆಪಿ ಒದಗಿಸಬಹುದೆಂದು ನಾನು ಭಾವಿಸುತ್ತೇನೆ. ಹೀಗಾಗಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದ್ದಾರೆ.

    ಬಿಜೆಪಿ ರಾಷ್ಟ್ರೀಯವಾದಿ ಪಕ್ಷ. ನಾನು ರಾಷ್ಟ್ರೀಯ ವಿಚಾರ ಹೊಂದಿರುವ ವ್ಯಕ್ತಿ. ಹೀಗಾಗಿ ನಾನು ಬೇಷರತ್ತಾಗಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದು, ನರೇಂದ್ರ ಮೊದಿ ಅವರ ಬಗ್ಗೆ ಇರುವ ಮೆಚ್ಚುಗೆಯೇ ಈ ನಿರ್ಧಾರ ತೆಗೆದುಕೊಳ್ಳಲು ಕಾರಣವಾಯಿತು ಎಂದಿದ್ದಾರೆ. ಬಿಜೆಪಿಗೆ ಸೇರ್ಪಡೆಗೊಳ್ಳುವ ನಿರ್ಧಾರ ಬಹಳ ತಡವಾಗಿತ್ತು. ಸಾಮಾಜಿಕ ಬದಲಾವಣೆಗಿಂತ ರಾಜಕೀಯ ಬದಲಾವಣೆ ಮುಖ್ಯ ಎಂದು ಭಾವಿಸುತ್ತೇನೆ. ಅದಕ್ಕಾಗಿಯೇ ನಾನು ಈಗ ರಾಜಕೀಯ ಪ್ರವೇಶ ಮಾಡುವ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಅಣ್ಣಾಮಲೈ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply