Connect with us

    LATEST NEWS

    ಮಾಜಿ ಮೇಯರ್ ಅಶ್ರಫ್ ಕಾಂಗ್ರೇಸ್ ಗೆ ಗುಡ್ ಬೈ

    ಮಾಜಿ ಮೇಯರ್ ಅಶ್ರಫ್ ಕಾಂಗ್ರೇಸ್ ಗೆ ಗುಡ್ ಬೈ

    ಮಂಗಳೂರು ಫೆಬ್ರವರಿ 8: ಮಂಗಳೂರಿನ ಮಾಜಿ ಮೇಯರ್ ಕೆ. ಅಶ್ರಫ್ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    ಇಂದು ತಮ್ಮ ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಿಗೆ ಸಲ್ಲಿಸಿದ್ದಾರೆ. ಕಾಂಗ್ರೇಸ್ ನ ಸಕ್ರಿಯ ಮುಖಂಡರಾಗಿದ್ದ ಅಶ್ರಫ್ ಮಂಗಳೂರು ಮಹಾನಗರಪಾಲಿಕೆಯ ಮೇಯರ್ ಆಗಿ ಆಯ್ಕೆಯಾಗಿ ಕಾರ್ಯನಿರ್ವಹಿಸಿದ್ದರು. ಕಾಂಗ್ರೇಸ್ ಹಿರಿಯ ಮುಖಂಡ ಜನಾರ್ಧನ ಪೂಜಾರಿ ಅವರ ಬೆಂಬಗಲಿರಾಗಿದ್ದ ಅಶ್ರಫ್ ಬಳಿಕ ಪೂಜಾರಿ ವಿರುದ್ದ ತಮ್ಮ ಅಸಮಧಾನವನ್ನು ಹೊರ ಹಾಕಿದ್ದರು.

    ಅಲ್ಲದೇ ಕಾಂಗ್ರೇಸ್ ಪಕ್ಷದ ಕಾರ್ಯ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಇತ್ತೀಚೆಗೆ ಮತ್ತೆ ಪಕ್ಷದಲ್ಲಿ ಸಕ್ರಿಯರಾಗಿದ್ದ ಅಶ್ರಫ್ ಅವರನ್ನು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿತ್ತು.

    ಆದರೆ ಇತ್ತೀಚೆಗೆ ಕಾಂಗ್ರೇಸ್ ಸರಕಾರ ಮುಸ್ಲಿಂ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಸರಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಸರಕಾರದ ವಿರುದ್ದ ಕಿಡಿಕಾರಿದ್ದರು.

    ಈ ನಡುವೆ ಅಶ್ರಫ್ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಅಲ್ಲದೇ ಅಶ್ರಫ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು.

    ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದರ ಮೂಲಕ ಅಶ್ರಫ್ ಜೆಡಿಎಸ್ ಸೇರ್ಪಡೆ ಖಚಿತಗೊಂಡಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *