Connect with us

    KARNATAKA

    ಮಾಜಿ ಸಚಿವ, ಸಂಸದ, ಹಿರಿಯ ರಾಜಕರಣಿ ಶ್ರಿನಿವಾಸ ಪ್ರಸಾದ್ ನಿಧನ,,!

    ಬೆಂಗಳೂರು: ಮಾಜಿ ಸಚಿವ ಹಾಗೂ ಚಾಮರಾಜ ನಗರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ (srinivas prasad)  (75)   ಇಂದು ಸೋಮವಾರ ಮುಂಜಾನೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಶ್ರಿನಿವಾಸ ಪ್ರಸಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

    ಸೋಮವಾರ ಬೆಳಗಿನ ಜಾವ 1:30ರ ಸುಮಾರಿಗೆ ಅವರು ನಿಧನರಾಗಿದ್ದಾರೆಕುಂಬ ಮೂಲಗಳು ತಿಳಿಸಿವೆ. ಹಲವು ದಿನಗಳಿಂದ ಪ್ರಸಾದ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯ ಡಾ. ಸುದರ್ಶನ್ ಬಲ್ಲಾಳ್, ಪ್ರಸಾದ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದರು. ಮೃತರ ಪಾರ್ಥಿವ ಶರೀರವನ್ನು ಬೆಳಗ್ಗೆ ಮೈಸೂರಿಗೆ ಕೊಂಡೊಯ್ದು, ಮೈಸೂರಿನ ವಸ್ತುಪ್ರದರ್ಶನ ಕೇಂದ್ರದಲ್ಲಿ ಸಾರ್ವಜನಿಕದ ದರ್ಶನಕ್ಕೆ ಇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಜನತಾ ಪರಿವಾರದಿಂದ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ ಶ್ರೀನಿವಾಸ್ ಪ್ರಸಾದ್ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಸಚಿವರಾಗಿ ಅನನ್ಯ ಸೇವೆ ಸಲ್ಲಿಸಿದ್ದಾರೆ. ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಚುನಾವಣೆಗೆ ಸ್ಪರ್ಧಿಸಿ ವಿಧಾನಸಭೆ ಹಾಗೂ ಸಂಸತ್ ಗೆ ಆಯ್ಕೆಯಾಗಿದ್ದರು. 2019ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ ಯಾಗಿದ್ದ ವಿ. ಶ್ರೀನಿವಾಸ್ ಪ್ರಸಾದ್, ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಆರ್.ಧ್ರುವನಾರಾಯಣ್ ಅವರನ್ನು ಸೋಲಿಸಿ ಸಂಸದರಾಗಿ ಆಯ್ಕೆಯಾಗಿದ್ದರು. ಮೊನ್ನೆ ನಡೆದ 2024ರ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿ ಪ್ರಚಾರಕ್ಕೆ ತೆರಳದೆ ದೂರ ಉಳಿದಿದ್ದರು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರನ್ನು ಭೇಟಿ ಮಾಡಿ ಅಚ್ಚರಿ ಮೂಡಿಸಿದ್ದರು. ಶ್ರೀಯುತರ ಅಂತಿಮ ಸಂಸ್ಕಾರ ಮೈಸೂರಿನಲ್ಲಿ ನೆರವೇರಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಸೇರಿದಂತೆ ಅನೇಕ ರಾಜಕೀಯ ನಾಯಕರು, ಸಮಾಜದ ಗಣ್ಯರು ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply