ಮಂಗಳೂರು: ಮಾಜಿ ಶಾಸಕ, ರಾಜಕಿಯ ನಾಯಕ ಮೊಯಿದೀನ್ ಬಾವಾ ಸೋದರ ಮುಮ್ತಾಜ್ ಅಲಿ ಶನಿವಾರ ರಾತ್ರಿಯಿಂದ ನಾಪತ್ತೆಯಾಗಿದ್ದಾರೆ.
ಅವರ ಐಷರಾಮಿ ಕಾರು ಮಂಗಳೂರಿನ ಕೂಳೂರು ಸೇತುವೆಯಲ್ಲಿ ಅಪಘಾತವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸ್ ಹಾಗೂ ಅಗ್ನಿಶಾಮಕ ದಳ ನದಿಯಲ್ಲಿ ಶೋಧ ಕಾರ್ಯ ಆರಂಭಿಸಿದ್ದಾರೆ. ಮುಮ್ತಾಜ್ ಅಲಿ ಚಲಾಯಿಸುತ್ತಿದ್ದ ಬಿಎಂ ಡಬ್ಲ್ಯೂ ಕಾರು ಸೇತುವೆ ಮೇಲೆ ಮುಂಭಾಗ ಅಪಘಾತ ನಡೆದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರ ಮೊಬೈಲ್ ಫೋನ್ ಸ್ವಿಚ್ಡ್ ಆಫ್ ಆಗಿದೆ. ಉದ್ಯಮಿಯಾಗಿರುವ ಮುಮ್ತಾಜ್ ಅಲಿ ಹೆಸರಾಂತ ಮಿಸ್ಬಾ ಸಮೂಹ ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದಾರೆ. ಅವರ ನಾಪತ್ತೆ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಆರಂಭಿದ್ದಾರೆ.