LATEST NEWS
ಅಜಾತಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಇನ್ನಿಲ್ಲ
ಅಜಾತಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಇನ್ನಿಲ್ಲ
ನವದೆಹಲಿ ಅಗಸ್ಟ್ 16: ರಾಜಕೀಯ ವಲಯದಲ್ಲಿ ಅಜಾತಶತ್ರು ಎಂದೇ ಪರಿಗಣಿತರಾಗಿರುವ ಅಟಲ್ ಬಿಹಾರಿ ವಾಜಪೇಯಿ ಇಂದು ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಕಳೆದ 24 ಗಂಟೆಗಳಿಂದ ವಾಜಪೇಯಿ ಅವರ ಆರೋಗ್ಯ ಸ್ಥಿತಿ ಸಂಪೂರ್ಣ ಹದಗೆಟ್ಟಿದ್ದ ಹಿನ್ನಲೆಯಲ್ಲಿ ಅವರಿಗೆ ವೆಂಟಿಲೇಟರ್ ಮೂಲಕ ಕೃತಕ ಉಸಿರಾಟಕ್ಕೆ ವ್ಯವಸ್ಥೆಯನ್ನು ಮಾಡಲಾಗಿತ್ತು.
ಕಿಡ್ನಿ ಹಾಗೂ ಮೂತ್ರಕೋಶದ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಜೂನ್ 11 ರಂದು ವಾಜಪೇಯಿ ಅವರನ್ನು ಏಮ್ಸ್ಗೆ ಸೇರಿಸಲಾಗಿತ್ತು. 93 ವರ್ಷದ ವಾಜಪೇಯಿ 2009ರಲ್ಲಿ ಪಾರ್ಶ್ವವಾಯುಗೆ ತುತ್ತಾದ ಬಳಿಕ ಅವರ ಒಂದೇ ಕಿಡ್ನಿ ಕಾರ್ಯನಿರ್ವಹಿಸುತ್ತಿತ್ತು. ಇದೇ ಅವರ ಆರೋಗ್ಯ ಸಮಸ್ಯೆ ಹೆಚ್ಚಳಕ್ಕೆ ಕಾರಣವಾಗಿತ್ತು.
ಕಳೆದ ಎರಡು ತಿಂಗಳಿನಿಂದ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಕಳೆದ 24 ಗಂಟೆಯಿಂದ ಸಂಪೂರ್ಣ ಬಿಗಡಾಯಿಸಿತ್ತು. ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆಯನ್ನು ಅಳವಡಿಸಲಾಗಿತ್ತು. ಅಲ್ಲದೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು.
ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರಿಗೆ ವೈದ್ಯರು ಎರಡು ದಿನಗಳಿಂದ ವೆಂಟಿಲೇಟರ್ ಮೂಲಕ ಕೃತಕ ಉಸಿರಾಟಕ್ಕೆ ವ್ಯವಸ್ಥೆಯನ್ನು ಮಾಡಿದ್ದರು.
ಇಂದು ಸಂಜೆ 5.05 ಕ್ಕೆ ಅಟಲ್ ಬಿಹಾರಿ ವಾಜಪೇಯಿ ಅವರು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ ಎಂದು ಏಮ್ಸ್ ವೈದ್ಯರು ಸ್ಪಷ್ಟಪಡಿಸಿದ್ದಾರೆ.