Connect with us

LATEST NEWS

ಮಾಜಿ ಕೇಂದ್ರ ಸಚಿವ ಧನಂಜಯ್ ಕುಮಾರ್ ನಿಧನ

ಮಾಜಿ ಕೇಂದ್ರ ಸಚಿವ ಧನಂಜಯ್ ಕುಮಾರ್ ನಿಧನ

ಮಂಗಳೂರು ಮಾರ್ಚ್ 4:ಮಾಜಿ ಕೇಂದ್ರ ಸಚಿವ , ಮಾಜಿ ಸಿಎಂ ಯಡಿಯೂರಪ್ಪ ಅವರ ಕಟ್ಟಾ ಬೆಂಬಲಿಗರಾಗಿದ್ದ ವಿ. ಧನಂಜಯ್ ಕುಮಾರ್ ಇಂದು ವಿಧಿವಶರಾಗಿದ್ದಾರೆ. ಕಳೆದ 6 ತಿಂಗಳಿನಿಂದ ಕೋಮಾದಲ್ಲಿದ್ದ ಅವರು ಇಂದು ಮಧ್ಯಾಹ್ನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಧನಂಜಯ್ ಕುಮಾರ್ ಅವರಿಗೆ 67 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ವಿ. ಧನಂಜಯ ಕುಮಾರ್ ಅವರನ್ನು ಕೆಲ ತಿಂಗಳುಗಳಿಂದ ನಗರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ವಿ.ಧನಂಜಯ್ ಕಳೆದ 6 ತಿಂಗಳಿನಿಂದ ಕೋಮಾ ಸ್ಥಿತಿಯಲ್ಲಿದ್ದರು.
ಇತ್ತೀಚೆಗೆ ಆರೋಗ್ಯ ತೀರಾ ಬಿಗಡಾಯಿಸಿದ ಕಾರಣ ಮಾಜಿ ಸಚಿವರು ಕೋಮ ಸ್ಥಿತಿಯಲ್ಲಿದ್ದು ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿತ್ತು. ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅವರು ತುಂಬಾ ಕೃಶವಾಗಿದ್ದರು.

ಕೇಂದ್ರದ ಹಣಕಾಸು ಖಾತೆ ರಾಜ್ಯ ಸಚಿವರಾಗಿದ್ದ ವಿ.ಧನಂಜಯ ಕುಮಾರ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಕಟ್ಟಾ ಬೆಂಬಲಿಗರಾಗಿದ್ದರು. ಬಿಜೆಪಿಯಲ್ಲಿ ರಾಜಕೀಯ ಜೀವನ ಆರಂಭಿಸಿದ ಧನಂಜಯ್ ಕುಮಾರ್, ಶಾಸಕರಾಗಿ, ಸಂಸದರಾಗಿ ಆಯ್ಕೆಯಾಗಿದ್ದರು. ಯಡಿಯೂರಪ್ಪ ಕೆಜಿಪಿ ಆರಂಭಿಸಿದಾಗ ಅವರ ಜೊತೆ ಹೆಜ್ಜೆ ಹಾಕಿದ್ದರು. 2016 ರಲ್ಲಿ ಧನಂಜಯ್ ಕುಮಾರ್ ಜೆಡಿಎಸ್ ಗೆ ಸೇರ್ಪಡೆಯಾಗಿದ್ದರು. ನಾಳೆ ವೇಣೂರಿನಲ್ಲಿ ಧನಂಜಯ ಕುಮಾರ್​ ಅಂತ್ಯಕ್ರಿಯೆ ನಡೆಯಲಿದೆ.

Facebook Comments

comments