Connect with us

LATEST NEWS

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಇನ್ನಿಲ್ಲ

ಉತ್ತರಪ್ರದೇಶ ಅಗಸ್ಟ್ 21: ಬಿಜೆಪಿ ಹಿರಿಯ ನಾಯಕ , ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್(89) ಇಂದು ನಿಧನರಾಗಿದ್ದಾರೆ.


ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ರಾಜೀವ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಆಸ್ಪತ್ರೆಯಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ
ಜುಲೈ 4ರಂದು ಸಿಂಗ್ ಅವರನ್ನು ಸಂಜಯ್ ಗಾಂಧಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಸೆಪ್ಸಿಸ್ ಮತ್ತು ಬಹು ಅಂಗಾಂಗ ವೈಫಲ್ಯದಿಂದ ಅವರು ನಿಧನರಾದರು ಎಂದು ಆಸ್ಪತ್ರೆಯು ಹೇಳಿಕೆಯಲ್ಲಿ ತಿಳಿಸಿದೆ.

ಡಿಸೆಂಬರ್ 6, 1992ರಂದು ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿದಾಗ ಕಲ್ಯಾಣ್ ಸಿಂಗ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ನಂತರ ಅವರು ರಾಜಸ್ಥಾನದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.