Connect with us

    LATEST NEWS

    ಮಂಗಳೂರು : ಕ್ಯಾನ್ಸರ್‌ ನಂತಹ ಮಹಾ ಮಾರಿಗಳಿಗೆ ಆಹ್ವಾನ, ನಗರದಲ್ಲಿ 5 ಅತೀ ಅಪಾಯಕಾರಿ ಸೇರಿ 19 ನಿಷೇಧಿತ ಪ್ಲಾಸ್ಟಿಕ್ ಪತ್ತೆ..!

    ಮಂಗಳೂರು: ಸ್ಮಾರ್ಟ್ ಸಿಟಿ ಮಂಗಳೂರಿನಲ್ಲಿ ಪ್ಲಾಸ್ಟಿಕ್ ಹಾವಳಿಗೆ ಮಿತಿಯೇ ಇಲ್ಲದಂತಾಗಿದೆ. ನಗರದಲ್ಲಿ 5  ತೀರ ಅಪಾಯಕಾರಿ ಪ್ಲಾಸ್ಟಿಕ್ ಸೇರಿ 19 ನಿಷೇಧಿತ ಪ್ಲಾಸ್ಟಿಕ್ ಗಳು ಲಭಿಸಿದ್ದು  ವಿವಿಧ ಬಗೆಯ ಕ್ಯಾನ್ಸರ್, ಚರ್ಮದ ಸಮಸ್ಯೆ, ಉಸಿರಾಟ ಸಮಸ್ಯೆ ಮತ್ತು ಮಿದುಳಿನ ಮೇಲೂ ದುಷ್ಟರಿಣಾಮ ಬೀರುವ ಸಾಧ್ಯತೆಗಳಿವೆ.
    ಗುರುವಾರ  ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಏಕಬಳಕೆಯ ಪ್ಲಾಸ್ಟಿಕ್ ನಿಷೇಧದ ಕುರಿತು ಹಾಗೂ ಪರ್ಯಾಯ ವಸ್ತುಗಳ ಬಳಕೆಯ ಬಗ್ಗೆ ಮೇಯರ್ ಮನೋಜ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಮಾಹಿತಿ ಕಾರ್ಯಾಗಾರದಲ್ಲೂ ಈ ಭಯಾನಕ ವಿಚಾರ ಪ್ರಸ್ತಾಪವಾಗಿದೆ.  ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ವರದಿ ಸಲ್ಲಿಸಲಾಗುವುದು ಎಂದು ನ್ಯಾಷನಲ್ ಪ್ರೊಡಕ್ಟಿವಿಟಿ ಕೌನ್ಸಿಲ್‌ನ ಅಸಿಸ್ಟೆಂಟ್ ಡೈರೆಕ್ಟರ್ ಮಹೋತ್ಸವ್ ಸಭೆಯಲ್ಲಿ ಹೇಳಿದ್ದಾರೆ. ಏಕಬಳಕೆ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ ಅನುಷ್ಠಾನ ಪರಾಮರ್ಶೆಯನ್ನು ಮಂಗಳೂರು ನಗರ ಸೇರಿದಂತೆ  ದೇಶದ ಆನೇಕ ಪ್ರಮುಖ ನಗರಗಳಲ್ಲಿ ನ್ಯಾಷನಲ್ ಪ್ರೊಡಕ್ಟಿವಿಟಿ ಕೌನ್ಸಿಲ್ ಮೂಲಕ ಕೇಂದ್ರ ಸರ್ಕಾರ ನಡೆಸುತ್ತಿದೆ. ಮಂಗಳೂರು ನಗರದ ಬಹುತೇಕ ಕಡೆಯಲ್ಲಿ ಪ್ಲಾಸ್ಟಿಕ್ ಕೈ ಚೀಲ, ಪ್ಲಾಸ್ಟಿಕ್ ಲೋಟ ಬಳಕೆ  ಅತ್ಯಧಿಕವಾಗಿದೆ .
     ಪ್ಲಾಸ್ಟಿಕ್ ಹೇಗೆ ಹಾನಿಕಾರಕ ?

    ಪ್ಲಾಸ್ಟಿಕ್‌ ತಯಾರಿಕೆಯಲ್ಲಿ ಬಳಸುವ ಅನೇಕ ರಾಸಾಯನಿಕಗಳು ಮಾನವ ಸೇರಿ ಜೀವ ಸಂಕುಲದ ಮೇಲೆ ಗಂಭಿರ ಪರಿಣಾಮ ಬೀರುತ್ತೆ ಇದು  ಮಕ್ಕಳ ಎಲುಬುಗಳನ್ನು ವಿರೂಪಗೊಳಿಸಬಲ್ಲ ಸಾಮಾರ್ಥ ಹೊಂದಿದೆ.  ವಿವಿಧ ಬಗೆಯ ಕ್ಯಾನ್ಸರ್‌ ರೋಗಕ್ಕೆ ಕಾರಣವಾಗಬಹುದು. ನರಮಂಡಲಕ್ಕೆ ಧಕ್ಕೆಯುಂಟುಮಾಡಿ ಮೆದುಳು ಮತ್ತು ಕಣ್ಣುಗಳಿಗೆ ಹಾನಿ ಮಾಡುತ್ತವೆ. ಅದಲ್ಲದೆ ಚರ್ಮಕ್ಕೆ ತೊಂದರೆ, ಪ್ಲಾಸ್ಟಿಕ್‌ ಅಂಶ ದೇಹಕ್ಕೆ ಸೇರಿಕೊಂಡಲ್ಲಿ ಮಕ್ಕಳ ಬೆಳವಣಿಗೆಗೆ ತೊಂದರೆ, ಉಸಿರಾಟದ ತೊಂದರೆ, ತಲೆನೋವು, ಆಯಾಸ, ಹಾರ್ಮೋನುಗಳ ಬದಲಾವಣೆಗಳು, ವೀರ್ಯಾಣುಗಳ ಸಂಖ್ಯೆ ಕ್ಷೀಣಗೊಳ್ಳುವಿಕೆ, ಬಂಜೆತನ ಮುಂತಾದ ತೊಂದರೆಗಳನ್ನು ಪ್ಲಾಸ್ಟಿಕ್ ಉಂಟುಮಾಡ ಬಹುದಾಗಿದೆ.  ತೇವಾಂಶವಿರುವ ಆಹಾರ ಪದಾರ್ಥಗಳು ದೀರ್ಘ‌ಕಾಲ ಪ್ಲಾಸ್ಟಿಕ್‌ನೊಂದಿಗೆ ಇದ್ದಾಗ ಅಲ್ಲಿ ರಾಸಾಯನಿಕ ಪ್ರಕ್ರಿಯೆ ಉಂಟಾಗಿ ಅವು ವಿಷವಾಗಿ ಪರಿವರ್ತನೆಗೊಳ್ಳುತ್ತವೆ. ಆ ಪದಾರ್ಥಗಳನ್ನು ನಾವು ಸೇವಿಸುವುದರಿಂದ ಅನೇಕ ರೋಗಗಳಿಗೆ ತುತ್ತಾಗಲು ಅವಕಾಶ ಕಲ್ಪಿಸಿದಂತಾಗುತ್ತದೆ.

    ಪ್ಲಾಸ್ಟಿಕ್‌ ಚೀಲಗಳಲ್ಲಿ ಹಸಿ ತ್ಯಾಜ್ಯವನ್ನು ತುಂಬಿ ಅವೈಜ್ಞಾನಿಕವಾಗಿ ರಸ್ತೆ ಬದಿ ಸೇರಿದಂತೆ ಎಲ್ಲೆಂದರಲ್ಲಿ ಎಸೆಯುತ್ತಾರೆ.  ಪರಿಣಾಮ ಆ ಚೀಲಗಳಲ್ಲಿರುವ ಆಹಾರ ವಸ್ತುಗಳನ್ನು ತಿನ್ನಲು ಬಯಸುವ ಪ್ರಾಣಿ ಪಕ್ಷಿಗಳು ಆಹಾರವನ್ನು ಪ್ಲಾಸ್ಟಿಕ್‌ನೊಂದಿಗೆ ನುಂಗಿ ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತವೆ. ನಮ್ಮ ದೇಶದಲ್ಲಿ ವರ್ಷಕ್ಕೆ ಸುಮಾರು 50 ಸಾವಿರ ಜಾನುವಾರುಗಳು ಪ್ಲಾಸ್ಟಿಕ್‌ ನುಂಗಿ ಪ್ರಾಣವನ್ನು ಕಳೆದುಕೊಳುತ್ತವೆ. ಮಣ್ಣಿನಲ್ಲಿ ಸೇರಿ ಹೋಗುವ ಅವಕಾಶ  ಇಲ್ಲದೆ  ಈ ಹಸಿ ತ್ಯಾಜ್ಯ ನೆಲದ ಸಂಪರ್ಕವನ್ನು ಪಡೆಯದೇ ಅಲ್ಲಿ ಕೊಳೆತು ನಾರುತ್ತದೆ. ಇದರಿಂದ ಮಣ್ಣಿನ ಫ‌ಲವತ್ತತೆ ಕಡಿಮೆಯಾಗುವುದಲ್ಲದೆ ಮಣ್ಣಿನಲ್ಲಿರುವ ಸೂಕ್ಷ್ಮಾ ಜೀವಿಗಳ ನಾಶಕ್ಕೂ ಕಾರಣವಾಗುತ್ತೆ. ಇದರಿಂದ ಅಂತರ್ಜಲದ ಮಟ್ಟ ಕುಸಿಯಲು ಪ್ಲಾಸ್ಟಿಕ್‌ ಕಾರಣವಾಗುತ್ತದೆ. ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು ಹರಿಯುವ ಚರಂಡಿ, ನದಿಗಳಲ್ಲಿ ಬಿಸಾಡುವುದರಿಂದ ಜಲ ಮಾಲಿನ್ಯ ಉಂಟಾಗುವುದಲ್ಲದೆ ನೀರಿನ ಹರಿವಿಗೆ ತೊಂದರೆ ಉಂಟಾಗುತ್ತದೆ. ಉಪಯೋಗಿಸಿ ಬಿಸಾಡುವ ಪ್ಲಾಸ್ಟಿಕ್‌ ತಟ್ಟೆ -ಲೋಟಗಳಲ್ಲಿ ನೀರು ನಿಲ್ಲುತ್ತದೆ. ಅದರಲ್ಲಿ ಸೊಳ್ಳೆಗಳು ಸಂತಾನೋತ್ಪತ್ತಿ ಮಾಡುತ್ತವೆ. ಆದ್ದರಿಂದ ಇವು ಮಲೇರಿಯಾ, ಫೈಲೇರಿಯಾ (ಆನೆಕಾಲು ರೋಗ), ಡೆಂಗ್ಯೂ, ಚಿಕುನ್‌ ಗುನ್ಯಾದಂಥ ಸಾಂಕ್ರಾಮಿಕ ರೋಗಗಳ ಆಶ್ರಯತಾಣವಾಗುತ್ತವೆ.

    ಪ್ಲಾಸ್ಟಿಕ್‌ ನೂರು ವರ್ಷ ಕಳೆದರೂ ಮಣ್ಣಿನಲ್ಲಿ ಸೇರಿ ಹೋಗುವುದಿಲ್ಲ. ಇದನ್ನು ಉರಿಸಿದಾಗ ಅದು ಮುದ್ದೆಯಾಗುತ್ತದೆಯೇ ವಿನಾ ನಾಶವಾಗುವುದಿಲ್ಲ. ಇದನ್ನು ಉರಿಸಿದಾಗ ದೊಡ್ಡ ಪ್ರಮಾಣದಲ್ಲಿ ಪೋಸ್ಟೀನ್‌, ಕಾರ್ಬನ್‌ ಮೋನಾಕ್ಸೆ„ಡ್‌, ಕ್ಲೋರಿನ್‌, ಸಲ#ರ್‌ ಡೈ ಆಕ್ಸೆ„ಡ್‌, ಡಯಾಕ್ಸಿನ್‌ ಮುಂತಾದ ವಿಷಾನಿಲಗಳು ವಾತಾವರಣ ಸೇರುತ್ತವೆ. ಇದು ವಾಯುಮಾಲಿನ್ಯಕ್ಕೆ ಕಾರಣವಾಗುತ್ತದೆ. ಈ ವಿಷಾನಿಲ ಗಾಳಿಯೊಂದಿಗೆ ಸೇರಿ ಮನುಷ್ಯನ ದೇಹವನ್ನು ಪ್ರವೇಶಿಸುವುದರಿಂದ ಶ್ವಾಸಕೋಶದ ತೊಂದರೆಗಳು, ಉಸಿರಾಟದ ತೊಂದರೆಗಳು ಹೆಚ್ಚು ಕಂಡುಬರುತ್ತವೆ.ಮನೆಯಲ್ಲಿ ಉಳಿದ ಆಹಾರ ವಸ್ತುಗಳನ್ನು ಪ್ಲಾಸ್ಟಿಕ್‌ ಚೀಲಗಳಲ್ಲಿ ತುಂಬಿ ಎಲ್ಲೆಂದರಲ್ಲಿ ಎಸೆಯುವ ಚಾಳಿ ಈಗೀಗ ಮತ್ತೆ ಹೆಚ್ಚಾಗುತ್ತಿದೆ.  ದನ-ಕರುಗಳು ಪ್ಲಾಸ್ಟಿಕ್ ಚೀಲ ಸಮೇತ ನುಂಗಿದಾಗ ಅವುಗಳ ಹೊಟ್ಟೆಯಲ್ಲಿ ಅದರಲ್ಲಿರುವ ರಾಸಾಯನಿಕಗಳು ಸೇರಿ ಹಾಲಿನೊಂದಿಗೆ ಬೆರೆತು ಮನುಷ್ಯನ ದೇಹವನ್ನು ಸೇರುತ್ತಿವೆ ಎಂಬುದು ಸಂಶೋಧನೆಯಿಂದ ದೃಢಪಟ್ಟಿದೆ. ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು ಸಮುದ್ರದಲ್ಲಿ ಎಸೆಯುವ ಪರಿಣಾಮ ಅವು ಅಲ್ಲಿರುವ ಜಲಚರಗಳ ದೇಹದೊಳಕ್ಕೆ ಸೇರಿ ಜಲಚರಗಳ ಜೀವಕ್ಕೆ ಹಾನಿಯುಂಟು ಮಾಡುತ್ತದೆ. ಒಟ್ಟಾರೆಯಾಗಿ ಮನುಕುಲ ,ಪರಿಸರಕ್ಕೆ, ಪ್ರಾಣಿಗಳ ಜೀವಕ್ಕೆ ಅಪಾರ ಹಾನಿಯುಂಟು ಮಾಡುವ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬೇಕು ಹಾಗೂ ಅದರಿಂದ ಸಮಸ್ಯೆ ಇದೆ ಎಂಬ ಬಗ್ಗೆ ಜನರಿಗೆ ಅರಿವು ಇದ್ದರೂ ಜನ ಎಚ್ಚೆತ್ತುಕೊಳ್ಳದಿರುವುದು ಇದರ ಗಂಭೀರತೆಗೆ ಸಾಕ್ಷಿಯಾಗಿದೆ. ಪ್ಲಾಸ್ಟಿಕ್ ಬಳಕೆ ನಿಯಂತ್ರಿಸುವ ಬಗ್ಗೆ ಜನರು ಆಸಕ್ತಿ ವಹಿಸಿದರೂ ಅಂಗಡಿಯವರೇ ಪ್ಲಾಸ್ಟಿಕ್ ಬಳಕೆಯನ್ನು ಹೆಚ್ಚು ನೆಚ್ಚಿಕೊಂಡಂತಿದೆ. ಬಟ್ಟೆ ಬ್ಯಾಗ್ ಸಹಿತ ಇತರ ಪರ್ಯಾಯ ಬಳಕೆಗೆ ಅವರಿಗೆ ಆಡಳಿತ ಕಟ್ಟುನಿಟ್ಟಿನ ಸೂಚನೆ ನೀಡಬೇಕಿದೆ. ಮದುವೆ ಮಂಟಪ, ದೇವಸ್ಥಾನ, ಹೊಟೇಲ್ ಸಹಿತ ವಿವಿಧ ಕಡೆಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ನಿಯಂತ್ರಿಸುವ ನಿಟ್ಟಿನಲ್ಲಿ ಪೂರಕ ಕ್ರಮಗಳನ್ನು ತಕ್ಷಣದಿಂದಲೇ ತೆಗೆದುಕೊಳ್ಳಬೇಕಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *