Connect with us

DAKSHINA KANNADA

ಸುಳ್ಯದ ಮಾವಿನಕಟ್ಟೆ ಬಳಿ ಭೀಕರ ರಸ್ತೆ ಅಪಘಾತ ನಾಲ್ವರ ಸಾವು

ಸುಳ್ಯದ ಮಾವಿನಕಟ್ಟೆ ಬಳಿ ಭೀಕರ ರಸ್ತೆ ಅಪಘಾತ ನಾಲ್ವರ ಸಾವು

ಸುಳ್ಳ ಅಕ್ಟೋಬರ್ 1:ಸುಳ್ಯದ ಜಾಲ್ಸೂರು ಸಮೀಪದ ಮಾವಿನಕಟ್ಟೆ ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನಪ್ಪಿರುವ ಘಟನೆ ನಡೆದಿದೆ.

ಸುಳ್ಯದ ಜಾಲ್ಸೂರು ಗ್ರಾಮದ ಅಡ್ಕಾರು ಮಾವಿನಕಟ್ಟೆ ಬಳಿ ಪುತ್ತೂರು ಕಡೆಯಿಂದ ಮಡಿಕೇರಿ ಕಡೆ ಹೋಗುತ್ತಿದ್ದ ಕಾರು ಹಾಗೂ ಮಡಿಕೇರಿಯಿಂದ ಪುತ್ತೂರು ಕಡೆ ಬರುತ್ತಿದ್ದ ಈಚರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿದ್ದ ಐವರ ಪೈಕಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಾವಿಗೀಡಾದವರು ಕೊಡಗು ಜಿಲ್ಲೆಯ ನಾಪೋಕ್ಲು ನಿವಾಸಿಗಳಾ ಹಸೈನಾರ್ ಹಾಜಿ, ಇಬ್ರಾಹಿಂ, ಹ್ಯಾರೀಸ್, ಉಮರ್, ಅಬ್ದುಲ್ ರಹಮಾನ್ ಎಂದು ಗುರುತಿಸಲಾಗಿದೆ.

ಕಾರಿನಲ್ಲಿ ಒಟ್ಟು 5 ಜನ ಇದ್ದರು ಎಂದು ಹೇಳಲಾಗಿದ್ದು, ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೆ ಮತಪಟ್ಟಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಅಪಘಾತ ನಡೆದ ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ ಕಾರಣ ಮತ್ತು ಅಪಗಾತದಿಂದಾಗಿ ರಸ್ತೆ ಬ್ಲಾಕ್ ಆಗಿದ್ದರಿಂದ ಈ ಮಾರ್ಗದಲ್ಲಿ ಸಂಚಾರ ವ್ಯತ್ಯಯವಾಗಿದೆ. ಕುರಿತಂತೆ ಸುಳ್ಯ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

comments