KARNATAKA
ಉಡುಪಿ – ಒಂದೇ ಕುಟುಂಬದ ನಾಲ್ವರ ಕಗ್ಗೊಲೆ
ಉಡುಪಿ, ನವೆಂಬರ್ 12 : ಉಡುಪಿ ಜಿಲ್ಲೆಯಲ್ಲಿ ಬರ್ಬರ ಹತ್ಯಾ ಕಾಂಡವೇ ನಡೆದು ಹೋಗಿದೆ. ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ನಡೆದ ಘಟನೆ ಉಡುಪಿಯ ಮಲ್ಪೆ ಸಮೀಪದ ನೇಜಾರುನಲ್ಲಿ ನಡೆದಿದೆ.
ಕೋಲೆಯಾದವರನ್ನು ಹಸೀನಾ(46)ಅಫ್ಘಾನ್(23)ಅಯಾಝ್(21),ಅಸೀಮ್(14) ಎಂದು ಗುರುತಿಸಲಾಗಿದೆ.
ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿ ಮೊದಲು ಮನೆಯೊಳಗೆ ಬಂದು ಮಹಿಳೆ ಜೊತೆ ಮಾತಿನ ಚಕಮಕಿ ನಡೆಸಿದ್ದಾನೆ. ಬಳಿಕ ಮಹಿಳೆ ಮತ್ತು ಮೂವರು ಮಕ್ಕಳ ಮೇಲೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ. ಮನೆಯಲ್ಲಿದ್ದ ಅತ್ತೆಗೂ ದುಷ್ಕರ್ಪಿ ಇರಿದಿದ್ದಾನೆ.
ಗಂಭೀರ ಗಾಯಗೊಂಡ ಅತ್ತೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಲಾಟೆ ಕೇಳಿ ಮನೆ ಬಳಿ ಯುವತಿಯನ್ನು ಬೆದರಿಸಿದ ದುಷ್ಕರ್ಮಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಉಡುಪಿ ಎಸ್ಪಿ ಅರುಣ್ ಕುಮಾರ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ನಾಲ್ವರನ್ನು ಚೂರಿಯಿಂದ ಇರಿದು ಕೊಲೆ ಮಾಡಲಾಗಿದೆ.
ಯಾವ ಉದ್ದೇಶಕ್ಕೆ ಕೊಲೆಯಾಗಿದೆ ಎಂಬುದು ತನಿಖೆಯಿಂದ ತಿಳಿಯಬೇಕಿದೆ. ಮನೆಯಲ್ಲಿ ಯಾವ ವಸ್ತುಗಳು ಕಳವು ನಡೆದಿಲ್ಲ. ಎಲ್ಲ ಆಯಾಮಗಳಿಂದ ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಎಸ್‌ಪಿ ಅರುಣ್ ತಿಳಿಸಿದ್ದಾರೆ.
ಮಲ್ಪೆ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
‘ನನ್ನ ಕ್ಷೇತ್ರದಲ್ಲಿ ನಡೆಯಬಾರದಂತಹ ಅಹಿತಕರ ಘಟನೆ ಇಂದು ನಡೆದಿದೆ. ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ದೀಪಾವಳಿ ಸಂದರ್ಭದಲ್ಲಿ ಇಡೀ ಪರಿಸರದಲ್ಲಿ ದುಃಖದ ವಾತಾವರಣ ಸೃಷ್ಠಿಸಿದೆ. ಎಸ್ಪಿಯವರು ಸಮರ್ಥ ತಂಡದೊಂದಿಗೆ ಆದಷ್ಟು ಬೇಗ ಈ ಪ್ರಕರಣವನ್ನು ಪತ್ತೆ ಹಚ್ಚಿ ಕುಟುಂಬಕ್ಕೆ ನ್ಯಾಯ ಕೊಡುವ ಕೆಲಸ ಮಾಡಲಿದೆ. ಕೃತ್ಯಕ್ಕೆ ಕಾರಣ ಪತ್ತೆ ಹಚ್ಚಿ ಆರೋಪಿಗಳಿಗೆ ಶಿಕ್ಷೆ ವಿಧಿಸಬೇಕೆಂದು ಶಾಸಕ ಯಶ್ಪಾಲ್ ಸುವರ್ಣ ಆಗ್ರಹಿದ್ದಾರೆ.
ಈ ಪ್ರಕರಣದ ಬಗ್ಗೆ ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿದ್ದಾರೆ. ಈ ಬಗ್ಗೆ ಗೃಹ ಸಚಿವರನ್ನು ಸಂಪರ್ಕಿಸಿ ಘಟನೆಯ ಮಾಹಿತಿ ನೀಡಲಾಗಿದೆ. ಈ ಕೃತ್ಯ ಇಡೀ ಜಿಲ್ಲೆಗೆ ದೊಡ್ಡ ಕಳಂಕವಾಗಿದೆ. ಪೊಲೀಸ್ ಇಲಾಖೆ ಮೇಲೆ ನಮಗೆ ಭರವಸೆ ಇದೆ. ಶೀಘ್ರವೇ ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯ ಮಾಡಲಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರು ಪ್ರತಿಕ್ರೀಯಿಸಿದ್ದಾರೆ.