DAKSHINA KANNADA
ಮೋರ್ಗನ್ಸ್ ಗೇಟ್ ಬಳಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಮಂಗಳೂರು, ಡಿಸೆಂಬರ್ 08: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ನಗರದ ಮೋರ್ಗನ್ಸ್ ಗೇಟ್ ಬಳಿ ಇಂದು ಮುಂಜಾನೆ ಬೆಳಕಿಗೆ ಬಂದಿದೆ.
ಮೃತರನ್ನು ನಾಗೇಶ ಶೇರಿಗುಪ್ಪಿ(30), ವಿಜಯಲಕ್ಷ್ಮಿ ( 26), ಸಪ್ನಾ (8 ) ಸಮರ್ಥ್ (4 ) ಎಂದು ಗುರುತಿಸಲಾಗಿದೆ. ಮೂಲತಃ ಬಾಗಲಕೋಟೆ ಬೀಳಗಿಯ ಸುನಗ್ ಗ್ರಾಮದವವರಾಗಿರುವ ಇವರು ಮಂಗಳೂರಿನಲ್ಲಿ ನೆಲೆಸಿ ಕೆಲಸ ಮಾಡುತ್ತಿದ್ದರು . ನಾಗೇಶ್ ಡ್ರೈವರ್ ಆಗಿ ದುಡಿಯುತ್ತಿದ್ದರೆ , ವಿಜಯಲಕ್ಷ್ಮಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು.

ನಾಗೇಶ್ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿದ್ದರೆ, ವಿಜಯಲಕ್ಷ್ಮೀ ಮತ್ತು ಮಕ್ಕಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಂಗಳೂರು ನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.