Connect with us

KARNATAKA

ಮುರ್ಡೇಶ್ವರದಲ್ಲಿ ಸಮುದ್ರಪಾಲಾದ ನಾಲ್ವರು ವಿಧ್ಯಾರ್ಥಿನಿಯರು

ಉತ್ತರಕನ್ನಡ ಡಿಸೆಂಬರ್ 10: ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ವಿಧ್ಯಾರ್ಥಿನಿಯರು ಸಮುದ್ರಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ ನಡೆದಿದೆ.


ಕೋಲಾರದ ಮುಳಬಾಗಿಲಿನಿಂದ ಕೊತ್ತೂರು ಮೂರಾರ್ಜಿ ದೇಸಾಯಿ ವಸತಿ ಶಾಲೆಯ 40ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೈಕಿ ನಾಲ್ವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಈ ಪೈಕಿ ಓರ್ವ ವಿದ್ಯಾರ್ಥಿನಿ ಶ್ರಾವಂತಿ ಶವ ಪತ್ತೆಯಾಗಿದ್ದು, ಇನ್ನುಳಿದ ಮೂವರು ವಿದ್ಯಾರ್ಥಿನಿಯರಿಗಾಗಿ ಶೋಧ ಕಾರ್ಯ ನಡೆದಿದೆ.

ಮುರುಡೇಶ್ವರ ಬೀಚ್​ನಲ್ಲಿ ಇಂದು ಸಂಜೆ ಆಟವಾಡುತ್ತಿದ್ದಾಗ ಏಕಾಏಕಿ ಏಳು ವಿದ್ಯಾರ್ಥಿನಿಯರು ಕೊಚ್ಚಿ ಕೊಂಡು ಹೋಗಿದ್ದರು. ಈ ವೇಳೆ ಮೂವರು ವಿದ್ಯಾರ್ಥಿನಿಯರಾದ ಯಶೋಧ, ವೀಕ್ಷಣಾ, ಲಿಪಿಕಾರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಇನ್ನುಳಿದಂತೆ ದೀಕ್ಷ, ಲಾವಣ್ಯ, ವಂದನ ಕಾಣೆಯಾಗಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆದಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *