Connect with us

    KARNATAKA

    ಚೈತ್ರ ಕುಂದಾಪುರ ಗ್ಯಾಂಗ್ ವಂಚನೆ ಪ್ರಕರಣ – ಅಭಿನವ ಹಾಲಶ್ರೀ 10 ದಿನ ಸಿಸಿಬಿ ಕಸ್ಟಡಿಗೆ

    ಬೆಂಗಳೂರು ಸೆಪ್ಟೆಂಬರ್ 20 : ಚೈತ್ರಾ ಕುಂದಾಪುರ ಗ್ಯಾಂಗ್ ನ 5 ಕೋಟಿ ವಂಚನೆ ಪ್ರಕರಣದಲ್ಲಿ ಓಡಿಶಾದಲ್ಲಿ ಅರೆಸ್ಟ್ ಆದ ಅಭಿನವ ಹಾಲಶ್ರೀಯವರನ್ನು ನ್ಯಾಯಾಲಯ 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿದೆ.


    ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಎನ್ನುವರಿಗೆ ಕೋಟ್ಯಂತರ ರೂಪಾಯಿ ತೆಗೆದುಕೊಂಡು ವಂಚನೆ ಪ್ರಕರಣದಲ್ಲಿ ಈಗಾಗಲೇ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಬಂಧನವಾಗಿದ್ದು, ಸಿಸಿಬಿ ಪೊಲೀಸರು ತನಿಖೆ ನಡೆಸಿದ್ದಾರೆ. ಇನ್ನು ಇಷ್ಟು ದಿನ ತಲೆಮರೆಸಿಕೊಂಡಿದ್ದ ಪ್ರಕರಣದ ಮೂರನೇ ಆರೋಪಿ ಹಾಲಶ್ರೀಯನ್ನು ನಿನ್ನೆ ಒಡಿಶಾದ ಕಟಕ್​ನಲ್ಲಿ ಬಂಧಿಸಲಾಗಿತ್ತು.

    ಇಂದು ಬೆಂಗಳೂರಿನ 19ನೇ ಎಸಿಎಂಎಂ ನ್ಯಾಯಾಲಯದ ಎದುರು ಆರೋಪಿಯನ್ನು ಹಾಜರು ಪಡಿಲಾಗಿದ್ದು. ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆ, ಮಹಜರು ಪ್ರಕ್ರಿಯೆ ನಡೆಸಬೇಕರುವುದರಿಂದ ಆರೋಪಿಯನ್ನು ತಮ್ಮ ವಶಕ್ಕೆ ನೀಡಬೇಕೆಂದು ಸಿಸಿಬಿ, ನ್ಯಾಯಾಧೀಶರ ಮುಂದೆ ಮನವಿ ಮಾಡಿದೆ. ಸಿಸಿಬಿಯ ಈ ಮನವಿ ಪುರಸ್ಕರಿಸಿದ ಕೋರ್ಟ್, ಆರೋಪಿಯನ್ನು ಸೆಪ್ಟೆಂಬರ್ 29ರ ವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಆದೇಶಿಸಿದೆ. ಇನ್ನು ಹಾಲಶ್ರೀ ಜಾಮೀನು ಅರ್ಜಿ ವಿಚಾರಣೆಯನ್ನು ಕಾಯ್ದಿರಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply