LATEST NEWS
ಸರಕಾರದ ಉಚಿತ ಅಕ್ಕಿ ಚೋರರ ಬಂಧನ

ಉಡುಪಿ ಅಗಸ್ಟ್ 27: ಕೊರೊನಾ ನಡುವೆ ಸರಕಾರದ ಉಚಿತ ಅಕ್ಕಿ ಕನ್ನ ಹಾಕಿದ ಕಳ್ಳರನ್ನು ಉಡುಪಿ ಡಿಸಿಐಬಿ ಪೊಲೀಸರು ಬಂಧಿಸಿದ್ದಾರೆ. ಕುಂದಾಪುರದ ಕೋಟೇಶ್ವರದಲ್ಲಿರುವ ಅಕ್ರಮ ಅಕ್ಕಿ ದಾಸ್ತಾನು ಗೋದಾಮಿಗೆ ದಾಳಿ ನಡೆಸಿದ ಉಡುಪಿ ಡಿಸಿಐಬಿ ಪೊಲೀಸರು ಗೋದಾಮಿನಲ್ಲಿದ್ದ 55 ಟನ್ ಅಕ್ಕಿಯನ್ನು ವಶಕ್ಕೆ ಪಡೆದು 5 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಇಸ್ಮಾಯಿಲ್ ಬ್ಯಾರಿ, ಮುಸ್ತಫಾ ತೌಫಿಕ್, ಉಬೇದುಲ್ಲಾ, ಮಹಮ್ಮದ್ ಮೇಚ್ರಾ, ನಿಯಾಸ್ ಎಂದು ಗುರುತಿಸಲಾಗಿದೆ. ಆರೋಪಿಗಳು ರಾಜ್ಯಸರಕಾರ ನೀಡುವ ಉಚಿತ ಅಕ್ಕಿಯನ್ನು ಸಂಗ್ರಹಿಸಿ ಅದನ್ನು ಮತ್ತೆ ಪಾಲಿಶ್ ಮಾಡಿ ಕೇರಳಕ್ಕೆ ಸಾಗಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರಿಂದ ಸುಮಾರು 55 ಟನ್ ಅಕ್ಕಿ , 2.75 ಲಕ್ಷ ನಗದು ಹಾಗೂ ಸ್ಥಳದಲ್ಲಿದ್ದ ಮೂರು ಕಾರು ಹಾಗೂ ಒಂ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ವಸ್ತುಗಳ ಮೌಲ್ಯ 1 ಕೋಟಿ ಎಂದು ಅಂದಾಜಿಸಲಾಗಿದೆ. ಡಿಸಿಐಬಿ ಪೊಲೀಸ್ ಇನ್ಸ್ ಪೆಕ್ಟರ್ ಮಂಜಪ್ಪ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ಬಂಧಿತರು ಕುಂದಾಪುರ ಮೂಡು ಗೋಪಾಡಿ ಮತ್ತು ಕೇರಳ ಮೂಲದವರು ಎಂದು ಹೇಳಲಾಗಿದೆ.