Connect with us

KARNATAKA

ಬಿಎಂಟಿಸಿಯಲ್ಲಿ ಆಗಸ್ಟ್ 15 ರಂದು ಸಾರ್ವಜನಿಕರಿಗೆ ಉಚಿತ ಪ್ರಯಾಣ

ಬೆಂಗಳೂರು: 75ನೇ ಸ್ವಾತಂತ್ರ್ಯೋತ್ಸವ ಮತ್ತು ಬಿಎಂಟಿಸಿ ಸಂಸ್ಥೆಯ ರಜತ ಮಹೋತ್ಸವ ಅಂಗವಾಗಿ ಆಗಸ್ಟ್‌ 15ರಂದು ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಬಿಎಂಟಿಸಿ ಅವಕಾಶ ಕಲ್ಪಿಸಿದೆ.

‘ಈ ಸಂಬಂಧ ಸಲ್ಲಿಸಿದ್ದ ಪ್ರಸ್ತಾವನೆಗೆ ಮುಖ್ಯಮಂತ್ರಿ ಅನುಮೋದನೆ ನೀಡಿದ್ದು, ಸಾರ್ವಜನಿಕರು ಒಂದು ದಿನ ವೋಲ್ವೊ ಸೇರಿ ಎಲ್ಲಾ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು’ ಎಂದು ಬಿಎಂಟಿಸಿ ಅಧ್ಯಕ್ಷ ನಂದೀಶ್‌ರೆಡ್ಡಿ ತಿಳಿಸಿದರು.

ದಿನದ ವರಮಾನ ₹3 ಕೋಟಿ

ದಿನದ ವರಮಾನ ₹3 ಕೋಟಿ ಇದ್ದು, ಅದರ ಹೊರೆ ಸಂಸ್ಥೆಯ ಮೇಲೆ ಬೀಳಲಿದೆ. ಸರ್ಕಾರ ಅನುಮತಿ ನೀಡಿದ್ದರಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ’ ಎಂದು ಹೇಳಿದರು.

300 ಎಲೆಕ್ಟ್ರಿಕ್ ಬಸ್‌: ಸ್ವಾತಂತ್ರ್ಯ ದಿನದ ಮುನ್ನ ದಿನ(ಆ.14) 300 ಎಲೆಕ್ಟ್ರಿಕ್ ಬಸ್‌ಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ. ವಿಧಾನಸೌಧದ ಪೂರ್ವ ದ್ವಾರದಲ್ಲಿ ಬಸ್‌ಗಳನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಗುವುದು ಎಂದು ನಂದೀಶ್‌ರೆಡ್ಡಿ ತಿಳಿಸಿದರು. ಈಗಾಗಲೇ 9 ಮಿಟರ್ ಉದ್ದದ 90 ಮಿನಿ ಎಲೆಕ್ಟ್ರಿಕ್ ಬಸ್‌ಗಳು ರಸ್ತೆಯಲ್ಲಿ ಓಡಾಡುತ್ತಿವೆ. 12 ಮೀಟರ್ ಉದ್ದದ ಎಲೆಕ್ಟ್ರಿಕ್ ಬಸ್‌ಗಳನ್ನು ಇದೇ ಮೊದಲ ಬಾರಿಗೆ ಸಾರ್ವಜನಿಕ ಸೇವೆಗೆ ನೀಡಲಾಗುತ್ತಿದೆ ಎಂದು ವಿವರಿಸಿದರು.

‘ಅಪಘಾತ ರಹಿತ ಚಾಲಕರಿಗೆ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಆ.16ರಂದು ವಿತರಿಸಲಾಗುವುದು. 168 ಮಂದಿಗೆ ಚಿನ್ನದ ಪದಕ ಮತ್ತು 2,968 ಮಂದಿಗೆ ಬೆಳ್ಳಿ ಪದಕ ವಿತರಿಸಲಾಗುತ್ತಿದೆ. ಬಿಎಂಟಿಸಿ ಸಿಬ್ಬಂದಿಯಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಜಯದೇವ ಆಸ್ಪತ್ರೆಯಲ್ಲಿ ಉಚಿತವಾಗಿ ಹೃದಯ ತಪಾಸಣೆಗೆ ವ್ಯವಸ್ಥೆ ಮಾಡಲಾಗಿದೆ. 10,700 ಸಿಬ್ಬಂದಿ ಇದರ ಲಾಭ ಪಡೆದುಕೊಳ್ಳಲಿದ್ದು, ಈ ಯೋಜನೆಗೂ ಚಾಲನೆ ನೀಡಲಾಗುತ್ತಿದೆ’ ಎಂದು ವಿವರಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *