LATEST NEWS
ದ್ವಿತೀಯ ಪಿಯುಸಿ ವಿಧ್ಯಾರ್ಥಿಗಳಿಗೆ ಪರಿಕ್ಷೆ ಸಮಯದಲ್ಲಿ KSRTC ಯಿಂದ ಉಚಿತ ಪ್ರಯಾಣ
ದ್ವಿತೀಯ ಪಿಯುಸಿ ವಿಧ್ಯಾರ್ಥಿಗಳಿಗೆ ಪರಿಕ್ಷೆ ಸಮಯದಲ್ಲಿ KSRTC ಯಿಂದ ಉಚಿತ ಪ್ರಯಾಣ
ಬೆಂಗಳೂರು ಫೆಬ್ರವರಿ 23: ರಾಜ್ಯದ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಗಳು ಮಾರ್ಚ್ 1 ರಿಂದ ಆರಂಭವಾಗಲಿರುವ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಧ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ.
ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭಗೊಳ್ಳಲಿದ್ದು, ವಿಧ್ಯಾರ್ಥಿಗಳಿಗೆ ತಮ್ಮದೇ ವಿಧ್ಯಾಸಂಸ್ಥೆ ಹೊರತು ಪಡಿಸಿ ಇತರ ವಿದ್ಯಾಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ನಿಯೋಜನೆಯಾಗಿರುವ ಹಿನ್ನಲೆಯಲ್ಲಿ ಕೆಎಸ್ ಆರ್ ಟಿಸಿ ಈ ಸೌಲಭ್ಯವನ್ನು ನೀಡಿದೆ.
ವಿಧ್ಯಾರ್ಥಿಗಳ ಹಿತ ದೃಷ್ಠಿಯಿಂದ ಕೆಎಸ್ ಆರ್ ಟಿಸಿ ದ್ವೀತಿಯ ಪಿಯುಸಿ ನಡೆಯುವ ದಿನಾಂಕಗಳಲ್ಲಿ ಅಂದರೆ ಮಾರ್ಚ್ 1 ರಿಂದ ಮಾರ್ಚ್ 17 ರವರೆಗೆ ಪರೀಕ್ಷೆಗೆ ಹಾಜರಾಗುವ ಎಲ್ಲಾ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಮತ್ತು ವಾಸಸ್ಥಳಕ್ಕೆ ಹಿಂತಿರುಗುವಾ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ನಗರ, ಹೊರವಲಯ, ಸಾಮಾನ್ಯ ಮತ್ತು ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.