BANTWAL
ಪ್ರವೀಣ್ ನೆಟ್ಟಾರು ಹಂತಕರು ತರಭೇತಿ ಪಡೆದಿದ್ದ ಫ್ರೀಡಂ ಕಮ್ಯುನಿಟಿ ಹಾಲ್ ರಾಷ್ಟ್ರೀಯ ತನಿಖಾ ದಳದ ವಶಕ್ಕೆ
ಪುತ್ತೂರು ಫೆಬ್ರವರಿ 23: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕರು ತರಭೇತಿ ಪಡೆಯಲು ಬಳಸಿದ್ದ ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್ ನ್ನು ಎನ್ಐಎ ವಶಕ್ಕೆ ಪಡೆದಿದೆ.
ಜುಲೈ 27 ರಂದು ಬಿಜೆಪಿ ಯುವಮೊರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಸುಳ್ಳ ತಾಲೂಕಿನ ಬೆಳ್ಳಾರೆಯಲ್ಲಿ ಹತ್ಯೆ ಮಾಡಲಾಗಿತ್ತು, ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಎನ್ಐಎ ಹಲವಾರು ಮಂದಿಯನ್ನು ಅರೆಸ್ಟ್ ಮಾಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕರಿಗೆ ತರಭೇತಿ ನೀಡಲು ಬಳಸಿದ್ದ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದ ಮಿತ್ತೂರು ಎಂಬಲ್ಲಿರುವ ಫ್ರೀಡಂ ಕಮ್ಯುನಿಟಿ ಹಾಲ್ ರಾಷ್ಟ್ರೀಯ ತನಿಖಾ ದಳದ ವಶಕ್ಕೆ ಪಡೆದಿದೆ. ಇದು ಉಗ್ರ ಚಟುವಟಿಕೆಯ ಕೇಂದ್ರವಾಗಿತ್ತು ಎಂದು ಎನ್.ಐ.ಎ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ. ಈ ಕಮ್ಯುನಿಟಿ ಹಾಲ್ ಫ್ರೀಡಂ ಎಜ್ಯುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಹೆಸರಿನಲ್ಲಿದ್ದು, ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಭಾಗಿಯಾದ ಎಲ್ಲಾ ಹಂತಕರಿಗೂ ಇಲ್ಲಿ ತರಭೇತಿ ನೀಡಲಾಗಿತ್ತು ಎಂದು ಎನ್ಐಎ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ.