LATEST NEWS
ನಾಳೆಯೂ ದಕ್ಷಿಣಕನ್ನಡ ಜಿಲ್ಲೆ ಸಂಪೂರ್ಣ ಬಂದ್

ನಾಳೆಯೂ ದಕ್ಷಿಣಕನ್ನಡ ಜಿಲ್ಲೆ ಸಂಪೂರ್ಣ ಬಂದ್
ಮಂಗಳೂರು ಮಾರ್ಚ್ 28: ಮಹಾಮಾರಿ ತಡೆಗಟ್ಟುವ ನಿಟ್ಟಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಸಲುವಾಗಿ ನಾಳೆಯೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಂಪೂರ್ಣ ಬಂದ್ ಮುಂದುವರೆಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊರೊನಾ ತೀವ್ರ ಗತಿಯಲ್ಲಿ ಏರುತ್ತಿದ್ದು, ಈ ಪರಿಸ್ಥಿತಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅಗತ್ಯವಾಗಿದೆ ಎಂದರು. ಈ ಹಿನ್ನಲೆಯಲ್ಲಿ ಇಂದಿನ ಬಂದ್ ನಂತೆ ನಾಳೆಯೂ ದಕ್ಷಿಣಕನ್ನಡ ಜಿಲ್ಲೆಯನ್ನು ಸಂಪೂರ್ಣ ಬಂದ್ ಮಾಡಲಾಗುವುದು ಎಂದರು. ಬಂದ್ ಸಂದರ್ಭ ಹಾಲು ವಿತರಣೆಗೆ ಸಂಪೂರ್ಣ ರಿಯಾಯಿತಿಯನ್ನು ನೀಡಲಾಗಿದ್ದು, ಆದರೆ ಮೆಡಿಕಲ್, ಸಿಲಿಂಡರ್ ಪೂರೈಕೆ , ಪೆಟ್ರೋಲ್ ಪಂಪ್ ಗಳು ಎಂದಿನಿಂತೆ ಕಾರ್ಯಾಚರಿಸಲಿದೆ ಎಂದರು. ಅಲ್ಲದೆ ಅಗತ್ಯ ವಸ್ತುಗಳ ಸಾಗಾಣಿಕೆಗೆ ಯಾವುದೇ ತೊಂದರೆಯಿಲ್ಲ ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆಯಲ್ಲಿರುವ ದಿನಗೂಲಿ ಕಾರ್ಮಿಕರಿಗೆ ಹಾಗೂ ನಿರ್ಗತಿಕರಿಗೆ ಕಾರ್ಮಿಕ ಇಲಾಖೆ ವತಿಯಂದ ಶಾಲೆ ಅಥವಾ ಹಾಸ್ಟೆಲ್ ಗಳಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು. ಜನರು ಸಂಕಷ್ಟದಲ್ಲಿದ್ದರೆ 1077 ಟೊಲ್ ಫ್ರೀ ನಂಬರ್ ಗೆ ಕಾಲ್ ಮಾಡಬಹುದು ಎಂದರು. ಜಿಲ್ಲೆಯ ವರ್ತಕರ ಸಭೆಯನ್ನು ಕರೆಯಲಾಗಿದ್ದು, ದಿನಸಿ ವಸ್ತುಗಳನ್ನು ಡೋರ್ ಡೆಲಿವರಿ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದ್ದು, ಮೊಬೈಲ್ ಆಪ್ ಮೂಲಕ ಅಗತ್ಯ ವಸ್ತುಗಳ ಡೊರ್ ಡೆಲಿವರಿ ಮಾಡಲಾಗುವುದು ಎಂದು ಹೇಳಿದರು.
ಕೊರೊನಾ ಲಾಕ್ ಡೌನ್ ಆದ ಹಿನ್ನಲೆ ನಿರ್ಗತಿಕರಿಗೆ ಬಡ ಕೂಲಿ ಕಾರ್ಮಿಕರಿಗೆ ಮುಜರಾಯಿ ಇಲಾಖೆಗೆ ಒಳಪಡುವ ಎ ದರ್ಜೆ ದೇವಸ್ಥಾನಗಳಿಂದ ಊಟದ ವ್ಯವಸ್ಥೆ ಕಲ್ಪಿಸಲಾಗುವುದು ಎಂದ ಅವರು ಯಕ್ಷಗಾನ ಕಲಾವಿದರಿಗೆ ಸರಕಾರದಿಂದ ನೆರವು ನೀಡಲಾಗುವುದು ಎಂದರು.