LATEST NEWS
ಕೊಳತ್ತಮಜಲಿನಲ್ಲಿ ಅಬ್ದುಲ್ ರಹಿಮಾನ್ ಅಂತ್ಯಕ್ರಿಯೆ – ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನ

ಮಂಗಳೂರು ಮೇ 28: ಬಂಟ್ವಾಳದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಅಬ್ದುಲ್ ರಹೀಂ ಅವರ ಅಂತ್ಯಕ್ರಿಯೆ ಅವರ ಊರಾದ ಕುರಿಯಾಳ ಗ್ರಾಮದ ಇರಾಕೋಡಿಯಲ್ಲಿ ಬುಧವಾರ ನೆರವೇರಿತು.
ದೇರಳಕಟ್ಟೆ ಖಾಸಗಿ ಆಸ್ಪತ್ರೆಯಿಂದ ಇಂದು ಬೆಳಿಗ್ಗೆ ಮೃತದೇಹವನ್ನು ಅವರ ಮನೆಗೆ ಕೊಂಡೊಯ್ಯಲಾಯಿತು. ಈ ವೇಳೆ ರಹೀಂ ಅವರ ತಂದೆ, ತಾಯಿ, ಸಹೋದರಿ, ಪತ್ನಿ ಹಾಗೂ ಬಂಧುಗಳು ಅಂತಿಮ ದರ್ಶನ ಪಡೆದರು. ಅವರ ಪಾರ್ಥೀವ ಶರೀರವನ್ನು ಮನೆಗೆ ತರುತ್ತಿದ್ದಂತೆಯೇ ಬಂಧುಗಳ ಆಕ್ರಂದನ ಮುಗಿಲು ಮುಟ್ಟಿತ್ತು. ಬಳಿಕ ಸ್ಥಳೀಯ ಜುಮ್ಮಾ ಮಸೀದಿಯಲ್ಲಿ ಧರ್ಮಗುರುಗಳು ಪ್ರಾರ್ಥನೆ ಸಲ್ಲಿಸಿ ಅಂತಿಮ ವಿಧಿಗಳನ್ನು ನೆರವೇರಿಸಿದರು.

ಬಳಿಕ ಸ್ಥಳೀಯ ಜುಮ್ಮಾಮಸೀದಿಯಲ್ಲಿ ಮಯ್ಯತ್ ನಮಾಜ್ ನೆರವೇರಿಸಲಾಯಿತು. ಅಂತಿಮ ಪ್ರಾರ್ಥನೆ ಸಲ್ಲಿಕೆ ಬಳಿಕ ಸ್ಥಳೀಯ ಸ್ಮಶಾನದಲ್ಲಿ ಅವರನ್ನು ದಫನ ಮಾಡಲಾಯಿತು. ರಹಿಮಾನ್ ಅಂತಿಮ ದರ್ಶನಕ್ಕೆ ಸಾವಿರಾರು ಜನರು ಆಗಮಿಸಿದ್ದರು.