Connect with us

DAKSHINA KANNADA

ಮಂಗಳೂರು ವಿವಿ ಯ ಆಡಿಟೋರಿಯಂನಲ್ಲಿ ಬಿಗಿ ಭದ್ರತೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ..!

Share Information

ವಿವಾದದ ಕೇಂದ್ರ ಬಿಂದುವಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಗಣೇಶೋತ್ಸವ ಇಂದು ಬಿಗಿ ಪೊಲೀಸ್ ಭದ್ರತೆಯಲ್ಲಿ ಆರಂಭವಾಯಿತು.

ಉಳ್ಳಾಲ : ವಿವಾದದ ಕೇಂದ್ರ ಬಿಂದುವಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಗಣೇಶೋತ್ಸವ ಇಂದು ಬಿಗಿ ಪೊಲೀಸ್ ಭದ್ರತೆಯಲ್ಲಿ ಆರಂಭವಾಯಿತು.

ವಿವಿಯ ಮಂಗಳಾ ಸಭಾಂಗಣವನ್ನು ಮಾವಿನ ಎಲೆ, ಹೂವು ಹಾಗೂ ಬಾಳೆ ಗಿಡದಿಂದ ಸಿಂಗಾರಿಸಿದ್ದು ವಿಶ್ವವಿದ್ಯಾನಿಲಯದ ಉಪಕುಲಪತಿ ಜಯರಾಜ್ ಅಮೀನ್ ಅವರು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಅರ್ಚಕರ ಸಮ್ಮುಖದಲ್ಲಿ ಸಕಲ ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಿದರು.

ಪ್ರತಿಷ್ಠಾಪನೆ ಸಮಾರಂಭದಲ್ಲಿ ವಿವಿ ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿ, ಸ್ಥಳೀಯರು ಭಾಗಿಯಾದರು. ಬಳಿಕ ಅರ್ಚಕರ ಸಮ್ಮುಖದಲ್ಲಿ ಪಂಚೆ, ಶಾಲು ತೊಟ್ಟು ಉಪಕುಲಪತಿ ಜಯರಾಜ್ ಅಮೀನ್‌ ಪೂಜೆ ಸಲ್ಲಿಸಿದರು. ಮಂಗಳೂರು ನಗರ ಡಿಸಿಪಿ ಸಿದ್ದಾರ್ಥ್ ಗೋಯಲ್ ನೇತೃತ್ವದಲ್ಲಿ ಪೊಲೀಸ್ ಭದ್ರತೆ ಮಾಡಲಾಗಿತ್ತು. ಕೆಎಸ್​ಆರ್​ಪಿ ಸೇರಿದಂತೆ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಆರ್​ಎಸ್​ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್,‌ ಶಾಸಕ ಡಾ. ಭರತ್ ಶೆಟ್ಟಿ ಜೊತೆಗೂಡಿ ಪೂಜೆ ಸಲ್ಲಿಸಿದರು.

ಮಹಾ ಪೂಜೆ ‌ಬಳಿಕ ಬಿಜೆಪಿ ಮತ್ತು ಹಿಂದೂ ಮುಖಂಡರು ಪ್ರಸಾದ ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಪ್ರಭಾಕರ್ ಭಟ್, ಯಾವುದೇ ಸರ್ಕಾರಗಳು ದೇವರ ಪೂಜೆಗೆ ಅಡ್ಡಿ ಮಾಡಬಾರದು ಎಂದರು. ನಾಲ್ಕೈದು ವರ್ಷಗಳಿಂದ ವಿಶ್ವವಿದ್ಯಾಲಯದಲ್ಲಿ ಗಣೇಶನ ಪೂಜೆ ಆಗುತ್ತಿತ್ತು. ಒಂದು ಸ್ವಲ್ಪ ವ್ಯತ್ಯಾಸ ಆದರೂ ಮತ್ತೆ ಇಲ್ಲಿ ವಿನಾಯಕನ ಪೂಜೆ ಆಗಿದೆ. ಈ ವಿಚಾರದಲ್ಲಿ ವಿಸಿ ಜಯರಾಜ್ ಅಮೀನ್ ಮತ್ತು ರಿಜಿಸ್ಟ್ರಾರ್ ರಾಜುಗೆ ನೂರು ನಮನಗಳು ಎಂದರು.

ಯಾವುದೇ ಗೊಂದಲ, ನೋವಾಗದಂತೆ ಜಯರಾಜ್ ಅಮೀನ್ ರೇ ಪೂಜೆಯಲ್ಲಿ ಕೂತಿದ್ದಾರೆ. ಆದರೆ ಇಲ್ಲಿ ಗಣೇಶ ಮೂರ್ತಿ ಸ್ವಲ್ಪ ಸಣ್ಣದಾಗಿದೆ. ಯಕ್ಷಗಾನದ ರೀತಿ ಕಿರೀಟ ಎದುರಿಗಿಟ್ಟು ಪೂಜೆ ಆಗಿದೆ. ಮುಂದಿನ ಬಾರಿ ಕಿರೀಟ ಗಣಪತಿ ತಲೆಯ ಮೇಲೆಯೇ ಇರಲಿ. ನಮ್ಮ ನಂಬಿಕೆ ಪ್ರಕಾರ ಗಣಪತಿ ಎತ್ತರಕ್ಕೆ ಏರಬೇಕು. ವಿಸಿಯವರ ಸಹಕಾರ ಮತ್ತು ನಂಬಿಕೆ ಭಾರೀ ದೊಡ್ಡದು. ಅವರ ನಂಬಿಕೆ ಮತ್ತು ಸಂಸ್ಕೃತಿಯ ಕಾರಣಕ್ಕೆ ಸುಸೂತ್ರವಾಗಿ ನಡೆದಿದೆ ಎಂದರು.

ಗಣೇಶೋತ್ಸವದಲ್ಲಿ ಪಾಲ್ಗೊಂಡ ಯು ಟಿ. ಖಾದರ್..!

ವಿಧಾನ ಸಭಾಧ್ಯಕ್ಷ ಯು ಟಿ. ಖಾದರ್ ಕೂಡ ಇಂದು ಕೊಣಾಜೆ ವಿಶ್ವ ವಿದ್ಯಾನಿಲಯದ ಮಂಗಳ ಸಭಾಂಗಣಕ್ಕೆ ಆಗಮಿಸಿ ಶ್ರೀ ಗಣೇಶನ ದರ್ಶನ ಪಡೆದುಕೊಂಡರು. ಈ ಸಂದರ್ಭ ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.

 


Share Information
Advertisement
Click to comment

You must be logged in to post a comment Login

Leave a Reply