Connect with us

KARNATAKA

ಮನೆ ಕಾರ್ಯಕ್ರಮಗಳಲ್ಲಿ ಗಣಪತಿ ಪೂಜೆ ಸಲ್ಲಿಸುವುದು ಮೌಢ್ಯದ ಆಚರಣೆ – ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

ಚಿತ್ರದುರ್ಗ ನವೆಂಬರ 03 : ಮನೆಗಳಲ್ಲಿ ಹಾಗೂ ಕಾರ್ಯಕ್ರಮಗಳಲ್ಲಿ ಗಣಪತಿಯನ್ನು ಪೂಜಿಸುವುದು, ಪಾರ್ಥನೆ ಸಲ್ಲಿಸುವುದು ನಮ್ಮ ಸಂಸ್ಕೃತಿ ಅಲ್ಲ ಅದು ಮೌಢ್ಯದ ಆಚರಣೆ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.


ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಸಾಣೆಹಳ್ಳಿಯಲ್ಲಿ ಗುರುವಾರದಿಂದ ಆರಂಭವಾದ ರಾಷ್ಟ್ರೀಯ ನಾಟಕೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಶಿವ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಗಣಪತಿ ಸ್ತುತಿಸುವುದು ಮೌಢ್ಯದ ಆಚರಣೆ, ವಚನ ಪ್ರಸ್ತುತ ಪಡಿಸುವುದು ನಿಜವಾದ ಪ್ರಾರ್ಥನೆ. ಶಿವಕುಮಾರ ಸ್ವಾಮೀಜಿ ಕಾರ್ಯಕ್ರಮಗಳ ಆರಂಭದಲ್ಲಿ ವಚನಗಳನ್ನು ಹಾಡಬಹುದು ಎಂದು ತೋರಿಸಿದ್ದಾರೆ ಎಂದು ಹೇಳಿದ್ದಾರೆ.


ಗಣಪತಿ ಕಾಲ್ಪನಿಕ ದೇವರು, ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ನೆಪ ಮಾತ್ರಕ್ಕೆ ಹುಟ್ಟಿಕೊಂಡ ದೇವರದು. ಬಾಹ್ಯ ವಸ್ತುಗಳಿಂದ ಮಾಡಿದ ದೇವರುಗಳು ದೇವರಲ್ಲ, ಮನೆಗಳಲ್ಲಿ ಅಥವಾ ಯಾವುದೇ ಸಮಾರಂಭಗಳಲ್ಲಿ ಮೊದಲು ಗಣಪತಿ ಪೂಜೆ, ಸ್ತೋತ್ರ ಶ್ಲೋಕ ಪಠಸಬೇಕು ಎಂಬುದು ಹಲವರ ನಂಬಿಕೆಯಾಗಿದ್ದು, ಅದರ ಬದಲು ವಚನಗಳನ್ನು ಪ್ರಾರ್ಥನೆಯಂತೆ ಪಠಿಸಬೇಕು ಎಂದು ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

Share Information
Advertisement
Click to comment

You must be logged in to post a comment Login

Leave a Reply