Connect with us

    DAKSHINA KANNADA

    ಮಂಗಳೂರು ವಿವಿ ಕ್ಯಾಂಪಸ್‌ನ ಮಂಗಳ ಆಡಿಟೋರಿಯಂನಲ್ಲಿ ಗಣೇಶೋತ್ಸವ ಆಚರಿಸಲು ಆಗ್ರಹಿಸಿ ವಿವಿ ಕುಲಪತಿ ಪ್ರೊ. ಜಯರಾಜ್ ಅಮೀನ್‌ಗೆ ಮನವಿ

    ಮಂಗಳೂರು, ಸೆಪ್ಟೆಂಬರ್ 02:- ಮಂಗಳೂರು ವಿಶ್ವವಿದ್ಯಾನಿಲಯ ಕೊಣಾಜೆಯ ಮಂಗಳ ಆಡಿಟೋರಿಯಂನಲ್ಲಿ ಪ್ರತಿ ವರ್ಷದಂತೆ ವಿದ್ಯಾರ್ಥಿ ಕ್ಷೇಮಪಾಲನ ವಿಭಾಗದಿಂದ ಆಚರಿಸಿಕೊಂಡು ಬರುತ್ತಿದ್ದ ಗಣೇಶೋತ್ಸವವನ್ನು ಯಾವುದೇ ಕಾರಣಕ್ಕೂ ರದ್ದು ಮಾಡಬಾರದೆಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ಡಿ. ವೇದವ್ಯಾಸ ಕಾಮತ್ ಆಗ್ರಹಿಸಿದ್ದಾರೆ.

    ಶಾಸಕರ ನೇತೃತ್ವದಲ್ಲಿ, ಮಾಜಿ ಸಿಂಡಿಕೇಟ್ ಸದಸ್ಯ ರಮೇಶ್ ಕೆ, ಭಾರತೀಯ ಜನತಾ ಪಾರ್ಟಿ ಮುಖಂಡರಾದ ಸಂತೋಷ್ ಬೋಳ್ಯಾರು, ಎಬಿವಿಪಿ ಜಿಲ್ಲಾ ಸಂಚಾಲಕ ಶ್ರೇಯಸ್ ಶೆಟ್ಟಿ, ವಿವಿ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಇಶಿಕ ಮತ್ತು ಉಪಾಧ್ಯಕ್ಷೆ ತ್ರಿವೇಣಿ ಇವರ ನಿಯೋಗವು ಕುಲಪತಿ ಪ್ರೊ ಜಯರಾಜ್ ಅಮೀನ್ ಮತ್ತು ಕುಲಸಚಿವ ಪ್ರೊ. ಕೃಷ್ಣರಾಜು ಚಲನ್ನವರ್ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿ ಮನವಿ ಸಲ್ಲಿಸಿದೆ.

    ಈ ಹಿಂದೆ ದಿನಾಂಕ 20-12-2022ರಂದು ಸಿಂಡಿಕೇಟ್ ಸಭೆಯಲ್ಲಿ ವಿದ್ಯಾರ್ಥಿ ಸಂಘದ ಮನವಿಯಂತೆ ಪ್ರತಿ ವರ್ಷವೂ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ಮೇಲುಸ್ತುವಾರಿಯಲ್ಲಿ ಈ ಕಾರ್ಯಕ್ರಮವನ್ನು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಕುಲಪತಿಯವರು ಮುಖ್ಯಮಂತ್ರಿಯವರ ಮೌಖಿಕ ಆದೇಶದ ಮೇರೆಗೆ ಯಾವುದೇ ಧಾರ್ಮಿಕ ಕಾರ್ಯಕ್ರಮ ಆಚರಿಸಬಾರದೆಂದು ಸೂಚಿಸಿರುತ್ತಾರೆ. ಆದ್ದರಿಂದ ಈ ವರ್ಷ ಮಂಗಳ ಆಡಿಟೋರಿಯಂನಲ್ಲಿ ಗಣೇಶ ಪೂಜೆಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿರುತ್ತಾರೆ.

    ಆದರೆ ಸಿಂಡಿಕೇಟ್ ನಿರ್ಣಯಕ್ಕೆ ವಿರುದ್ಧವಾಗಿ ಕುಲಪತಿಯವರು ಏಕಪಕ್ಷೀಯ ನಿರ್ಣಯ ಕೈಗೊಂಡಿರುವುದು ಚರ್ಚೆಗೆ ಕಾರಣವಾಗಿದೆ. ಯಾವುದೇ ಸಿಂಡಿಕೇಟ್ ನೀರ್ಣಯವು ಕುಲಾಧಿಪತಿಗಳಾದ ರಾಜ್ಯಪಾಲರ ದೃಢೀಕರಣದೊಂದಿಗೆ ಅಂಗೀಕಾರವಾದ ತೀರ್ಮಾನವಾಗಿರುತ್ತದೆ. ಆದರೆ ಕುಲಪತಿಯವರು ಸಿಂಡಿಕೇಟ್ ಸಭೆಯಲ್ಲಿ ಈ ನಿರ್ಣಯವನ್ನು ತಡೆಯದೆ ಹಾಗೂ ರಾಜ್ಯಪಾಲರ ಗಮನಕ್ಕೆ ತಾರದೆ, ಈಗ ವಿದ್ಯಾರ್ಥಿ ನಿಲಯದಲ್ಲಿ ಗಣೇಶೋತ್ಸವ ನಡೆಸಿ ಎನ್ನುತ್ತಿರುವುದು ಸಮರ್ಥನೀಯವಲ್ಲ.

    ವಿದ್ಯಾರ್ಥಿ ಕ್ಷೇಮಪಾಲನ ವಿಭಾಗದ ಹಣದಲ್ಲಿ ಗಣೇಶೋತ್ಸವ ಆಚರಿಸಿಕೊಂಡು ಬರುತ್ತಿರುವುದು ರೂಢಿಯಾಗಿದೆ. ಆದರೆ ಈ ವರ್ಷ ವಿವಿ ಆರ್ಥಿಕವಾಗಿ ಸಂಕಷ್ಟದಲ್ಲಿರುವುದರಿಂದ ಈ ಹಣವನ್ನು ಬಳಕೆ ಮಾಡದೆ, ಸಣ್ಣ ಮಟ್ಟದಲ್ಲಿ ವಿದ್ಯಾರ್ಥಿ ನಿಲಯದಲ್ಲಿ ಗಣೇಶೋತ್ಸವ ಆಚರಿಸೋಣ ಎಂದು ಕುಲಪತಿಗಳು ಶಾಸಕರ ನೇತೃತ್ವದ ನಿಯೋಗಕ್ಕೆ ಮನವರಿಕೆ ಮಾಡಲು ಪ್ರಯತ್ನಿಸಿದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *