Connect with us

    DAKSHINA KANNADA

    ಮಂಗಳೂರು ವಿವಿಯಲ್ಲಿ ಗಣೇಶೋತ್ಸವ ವಿವಾದ : ಕುಲಪತಿ ಸ್ಪಷ್ಟನೆ

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಗಣೇಶೋತ್ಸವ ಆಚರಿಸುವ ಬಗ್ಗೆ ವಿವಿ ಕುಲಪತಿ ಜಯರಾಜ್​ ಅಮೀನ್ ಸ್ಪಷ್ಟನೆ ನೀಡಿದ್ದಾರೆ.

    ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಉಂಟಾಗಿರುವ ವಿವಾದಕ್ಕೆ ಮಂಗಳೂರು ವಿವಿ ಕುಲಪತಿ ಪ್ರೊ. ಜಯರಾಜ್​ ಅಮೀನ್​ ಸ್ಪಷ್ಟನೆ ನೀಡಿದ್ದಾರೆ.

    ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸ್ಟೇಡಿಯಂನಲ್ಲಿ ಪ್ರತಿ ವರ್ಷ ಗಣೇಶೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಗಣೇಶೋತ್ಸವದ ವೆಚ್ಚವನ್ನು ಮಂಗಳೂರು ವಿಶ್ವವಿದ್ಯಾನಿಲಯದಿಂದ ಭರಿಸಲಾಗುತ್ತಿತ್ತು.

    ಆದರೆ, ಆಡಿಟ್ ವೇಳೆ ಈ ಖರ್ಚಿಗೆ ಆಕ್ಷೇಪ ವ್ಯಕ್ತವಾಗಿತ್ತು.ಹಾಗಾಗಿ ಈ ಬಾರಿ ಹೊಸದಾಗಿ ನೇಮಕವಾದ ಮಂಗಳೂರು ವಿವಿ ಕುಲಪತಿ ಜಯರಾಜ್ ಅಮೀನ್ ಅವರು ವಿಶ್ವವಿದ್ಯಾನಿಲಯದಿಂದ ಗಣೇಶೋತ್ಸವ ಆಚರಿಸುವ ವಿಚಾರದಲ್ಲಿ ಗೊಂದಲದಲ್ಲಿದ್ದರು.

    ಇದರ ಜೊತೆಗೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ವಿಶ್ವವಿದ್ಯಾನಿಲಯದ ಕುಲಪತಿ ಜಯರಾಜ್ ಅಮೀನ್ ಒತ್ತಡ ಹೇರಿ ಗಣೇಶೋತ್ಸವ ಆಚರಣೆ ಮಾಡಲು ಅವಕಾಶ ಕಲ್ಪಿಸುವಂತೆ ಒತ್ತಾಯಿಸಿದ್ದರು.

    ಈ ಬಗ್ಗೆ ಕುಲಪತಿ ಜಯರಾಜ್ ಅಮೀನ್ ಕರ್ನಾಟಕ ಸರಕಾರದ ಉನ್ನತ ಶಿಕ್ಷಣ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಸಲಹೆ ಕೇಳಿದ್ದರು. ಇದೀಗ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಗಣೇಶೋತ್ಸವ ಆಚರಿಸುವ ಬಗ್ಗೆ ಕುಲಪತಿ ಜಯರಾಜ್ ಅಮೀನ್ ಸ್ಪಷ್ಟನೆ ನೀಡಿದ್ದಾರೆ.

    ಈ ಬಗ್ಗೆ ಕುಲಪತಿಗಳ ಕಾರ್ಯಾಲಯ ನೀಡಿರುವ ಪತ್ರದಲ್ಲಿ, “ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಕುಲಪತಿಗಳಿಂದ ವಿರೋಧವಿದೆ ಎಂದು ಕಳೆದ ಕೆಲವು ದಿನಗಳಿಂದ ಮಾಧ್ಯಮದಲ್ಲಿ ವರದಿಯಾಗುತ್ತಿದೆ.

    ಈ ವಿಚಾರ ಸತ್ಯಕ್ಕೆ ದೂರವಾದದು ಹಾಗೂ ವಿಷಾದನೀಯ. ವಿಶ್ವವಿದ್ಯಾನಿಲಯದ ಆವರಣದಲ್ಲಿ ಗಣೇಶೋತ್ಸವ ನಡೆಸಲು ಯಾವುದೇ ನಿರಾಕರಣೆ/ವಿರೋಧ ಇರುವುದಿಲ್ಲ.

    ಈ ಹಿಂದೆ ನಡೆದಂತೆ ಈ ವರ್ಷವೂ ವಿವಿಯ ಆವರಣದಲ್ಲಿ ಗಣೇಶೋತ್ಸವ ಕಾರ್ಯಕ್ರಮ ನಡೆಯುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *