Connect with us

LATEST NEWS

ಕಾರ್ಕಳದಲ್ಲಿ ಹಿಂದೂ ಯುವತಿಯನ್ನು ಅಪಹರಿಸಿ ಗ್ಯಾಂಗ್ ರೇಪ್ , ಇಬ್ಬರ ಬಂಧನ..!

ಕಾರ್ಕಳ : ಮದ್ಯದಲ್ಲಿ ಮಾದಕ ವಸ್ತು ನೀಡಿ 21 ವರ್ಷದ ಹಿಂದೂ ಯುವತಿಯ ಮೇಲೆ  ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ  ಉಡುಪಿ ಜಿಲ್ಲೆಯ ಕಾರ್ಕಳ(Karkala)ದಲ್ಲಿ ನಡೆದಿದೆ.

ಕೃತ್ಯಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಅಲ್ತಾಫ್ ಬಂಧಿತ ಆರೋಪಿಯಾಗಿದ್ದಾನೆ. ಯುವತಿಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಅತ್ಯಾಚಾರ ಪ್ರಕರಣ (Rape) ದಾಖಲಿಸಿದ್ದು ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ’

ಸಂತ್ರಸ್ತ ಯುವತಿಗೆ ಅಲ್ತಾಫ್ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ. ನಂತರ ಯುವತಿಯನ್ನು ಪುಸಲಾಯಿಸಿ ಸುತ್ತಾಡಲು ಕರೆದುಕೊಂಡು ಹೋಗಿದ್ದಾನೆ. ನಂತರ ಇಬ್ಬರು ಸ್ನೇಹಿತರ ಕರೆಸಿ ಬಿಯರ್ ಬಾಟಲಿ ತರಿಸಿ ಆ ಬಿಯರ್‌ನಲ್ಲಿ ಮಾದಕ ವಸ್ತು ಬೆರೆಸಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎನ್ನಲಾಗಿದೆ. ಕೃತ್ಯ ನಡೆಸಿದ ಬಳಿಕ ಆಕೆಯನ್ನು ಮನೆ ಸಮೀಪ ಬಿಟ್ಟು ಹೋಗಿದ್ದಾರೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿದ್ದು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ನಡೆದಿದೆ. ಉಳಿದ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿವೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಎಸ್‌ ಪಿ  ಕಾರ್ಕಳ ಅತ್ಯಾಚಾರ (Karkala Rape) ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ವಿಡಿಯೋದಲ್ಲಿ ಹೇಳಿಕೆ ಬಿಡುಗಡೆ ಮಾಡಿದ ಅವರು, ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನು ಅಪಹರಿಸಿ ಅತ್ಯಾಚಾರಗೈದ ದೂರು ಬಂದಿದೆ. ಸಂತ್ರಸ್ತೆ ಮತ್ತು ಆರೋಪಿ ಮೂರು ತಿಂಗಳಿಂದ ಇನ್‌ಸ್ಟಾಗ್ರಾಮ್‌ ಮೂಲಕ ಪರಸ್ಪರ ಪರಿಚಯ ಹೊಂದಿದ್ದರು. ಶುಕ್ರವಾರ ಆರೋಪಿ ಅಲ್ತಾಫ್ ಕರೆ ಮಾಡಿ ಸಂತ್ರಸ್ತೆಗೆ ಬರಲು ಹೇಳಿದ್ದ. ಆಕೆ ಬಂದಾಗ ಕಾರಿನಲ್ಲಿ ಅಪಹರಿಸಿದ್ದಾನೆ.ಈ ನಡುವೆ ಮದ್ಯಪಾನದಲ್ಲಿ ಏನೋ ಬೆರೆಸಿ ಅತ್ಯಾಚಾರ ಮಾಡಿದ್ದಾಗಿ ಸಂತ್ರಸ್ತೆ ತಿಳಿಸಿದ್ದಾಳೆ. ಆರೋಪಿ ಅಲ್ತಾಫ್‌ನನ್ನು ಬಂಧಿಸಲಾಗಿದೆ. ಆರೋಪಿಗೆ ಬಿಯರ್ ಬಾಟಲ್ ತಂದುಕೊಟ್ಟಿದ್ದ ಇಬ್ಬರ ಪೈಕಿ ಸುಬೇರ್ ಎಂಬಾತನನ್ನು ಬಂಧಿಸಲಾಗಿದ್ದು ಕೃತ್ಯಕ್ಕೆ ಬಳಸಿದ ವಾಹನವನ್ನು ಜಪ್ತಿ ಮಾಡಲಾಗಿದೆ. ಸಂತ್ರಸ್ತೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕಾರ್ಕಳ ಹಿಂದೂ ಯುವತಿ ಮೇಲಿನ ಅತ್ಯಾಚಾರಕ್ಕೆ ಶಾಸಕ ಸುನೀಲ್ ಕುಮಾರ್ ಖಂಡನೆ

 

 

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *