Connect with us

LATEST NEWS

ಪಾಟ್ನಾ – ಗಾಯಕಿಯ ಮೇಲೆ ಸಾಮೂಹಿಕ ಅತ್ಯಾಚಾರ

ಪಾಟ್ನಾ: ಗಾಯಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬಿಹಾರ ರಾಜಧಾನಿಯ ಕೃಷ್ಣನಗರ ಪ್ರದೇಶದಲ್ಲಿ ನಡೆದಿದ್ದು, ಮೂವರು ಯುವಕರನ್ನು ಬಂಧಿಸಲಾಗಿದೆ.


ಬಂಧಿತ ಆರೋಪಿಗಳನ್ನು ಪಿಂಟು ಕುಮಾರ್, ಸಂಜೀವ್ ಕುಮಾರ್ ಹಾಗೂ ಕರು ಕುಮಾರ್ ಎಂದು ಗುರುತಿಸಲಾಗಿದ್ದು, ಇವರು ಅತ್ಯಾಚಾರ ಸಂತ್ರಸ್ಥೆಯನ್ನು ಸಮಾರಂಭದಲ್ಲಿ ಕಾರ್ಯಕ್ರಮ ನಡೆಸಿಕೊಡುವಂತೆ ಕೇಳಿಕೊಂಡಿದ್ದರು ಎಂದು ಗಾಯಕಿ ದೂರಿನಲ್ಲಿ ತಿಳಿಸಿದ್ದಾರೆ.

ಆರೋಪಿಗಳ ಕೋರಿಕೆಯಂತೆ ಕಾರ್ಯಕ್ರಮ ನಡೆಸಿಕೊಡಲು ಅವರು ಹೇಳಿದ ಸ್ಥಳಕ್ಕೆ ತೆರಳಿದಾಗ ಆಘಾತವಾಯಿತು. ಅಲ್ಲಿ ಅಂಥ ಯಾವುದೇ ಸಮಾರಂಭ ಇರಲಿಲ್ಲ. ಈ ಕುರಿತು ವಿಚಾರಿಸಿದಾಗ ನನ್ನನ್ನು ಕೊಠಡಿಯೊಂದಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಇದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ’ಎಂದು ಸಂತ್ರಸ್ತೆ ಹೇಳಿದ್ದಾರೆ. ‘ಹೇಗೋ ಮಾಡಿ ಅಲ್ಲಿಂದ ತಪ್ಪಿಸಿಕೊಂಡು ಮತ್ತೊಂದು ಕೊಠಡಿಗೆ ತೆರಳಿ ಲಾಕ್ ಮಾಡಿಕೊಂಡೆ. ಕೂಡಲೇ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ಘಟನೆ ಬಗ್ಗೆ ತಿಳಿಸಿದೆ’ ಎಂದು ಅವರು ಉಲ್ಲೇಖಿಸಿದ್ದಾರೆ. ‘ನಾವು ತಕ್ಷಣವೇ ಸ್ಥಳಕ್ಕೆ ತೆರಳಿ ಸಂತ್ರಸ್ತೆಯನ್ನು ರಕ್ಷಿಸಿ ಆರೋಪಿಗಳನ್ನು ಬಂಧಿಸಿದ್ದೇವೆ’ ಎಂದು ಕೃಷ್ಣನಗರ ಪೊಲೀಸ್ ಠಾಣಾಧಿಕಾರಿ ರವಿ ರಂಜನ್ ತಿಳಿಸಿದ್ದಾರೆ

Advertisement
Click to comment

You must be logged in to post a comment Login

Leave a Reply