LATEST NEWS
ಗಂಗೊಳ್ಳಿ – ಬೈಕ್ ಗೆ ಲಾರಿ ಡಿಕ್ಕಿ ಅಪ್ರಾಪ್ತ ಸವಾರ ಸಾವು
ಗಂಗೊಳ್ಳಿ ಎಪ್ರಿಲ್ 01: ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಅಪ್ರಾಪ್ತ ಬೈಕ್ ಸವಾರ ಸಾವನಪ್ಪಿ ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಗಂಗೊಳ್ಳಿ ಅಂಚೆ ಕಚೇರಿ ಬಳಿ ನಿವಾಸಿ ಅಬ್ದುಲ್ ಖಾದರ್ ಎಂಬವರ ಮಗ ಮುಹಮ್ಮದ್ ಕಾಶಿಫ್(17) ಎಂದು ಗುರುತಿಸಲಾಗಿದೆ. ಸಹಸವಾರ ಮುಹಮ್ಮದ್ ಫೈಝ್(14) ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಗಸ್ತು ವಾಹನವು ಕೂಡಲೇ ಆಂಬ್ಯುಲೆನ್ಸ್ ಕರೆ ಮಾಡಿದ್ದು, ಸ್ಥಳಕ್ಕೆ ಆಗಮಿಸಿದ ತಂಡ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದು, ಅದರಲ್ಲಿ ಗಂಭೀರವಾಗಿ ಗಾಯಗೊಂಡ ಕಾಶಿಫ್ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login