Connect with us

LATEST NEWS

ನಾಳೆ ಅಕ್ಟೋಬರ್ 1 ರಂದು ಸ್ವಯಂಪ್ರೇರಿತ ಗಂಗೊಳ್ಳಿ ಬಂದ್ ಗೆ ಕರೆ ನೀಡಿದ ಹಿಂದೂ ಜಾಗರಣ ವೇದಿಕೆ

ಉಡುಪಿ ಸೆಪ್ಟೆಂಬರ್ 30: ಅಕ್ರಮ ಕಸಾಯಿಖಾನೆ, ಗೋಹತ್ಯೆಯನ್ನು ಬುಡಸಮೇತ ನಿರ್ಮೂಲನೆ ಹಾಗೂ ಗಂಗೊಳ್ಳಿಯಲ್ಲಿ ಅಕ್ರಮವಾಗಿ ನಿರ್ಮಾಣವಾಗಿ ಪ್ರಾರ್ಥನಾ ಮಂದಿರಗಳನ್ನು ಧ್ವಂಸಗೊಳಿಸಬೇಕೆಂದು ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಅಕ್ಟೋಬರ್ 1 ರಂದು ಸ್ವಯಂಪ್ರೇರಿತ ಗಂಗೊಳ್ಳಿ ಬಂದ್ ಗೆ ಕರೆ ನೀಡಿದೆ.


ಉಡುಪಿ ಕೋಮು ಸೂಕ್ಷ ಪ್ರದೇಶ ಗಂಗೊಳ್ಳಿಯಲ್ಲಿ ಮತ್ತೆ ಶಾಂತಿ ಕದಡಲು ದುಷ್ಕರ್ಮಿಗಳು ಪ್ರಯತ್ನಿಸುತ್ತಿದ್ದು, ಇತ್ತೀಚೆಗೆ ಬಹಿರಂಗವಾಗಿ ಗೋವಿನ ಹತ್ಯೆ ಮಾಡಿ ಅದನ್ನು ವಿಡಿಯೋವನ್ನು ದುಷ್ಕರ್ಮಿಗಳು ವೈರಲ್ ಮಾಡಿದ್ದರು, ಇದೇ ವಿಚಾರದಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು, ಆದರೆ ಬಂಧಿತ ಆರೋಪಿಗಳು ಮೂರೇ ದಿನದಲ್ಲಿ ಜಾಮೀನು ಪಡೆದು ಹೊರಗೆ ಬಂದಿದ್ದಾರೆ.

ಈ ನಡುವೆ ಆರೋಪಿಗಳಿಗೆ ಜಾಮೀನು ದೊರೆತಿದ್ದಕ್ಕೆ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಮತ್ತೆ ಆರೋಪಿಗಳನ್ನು ಬಂಧಿಸುವಂತೆ ಪೊಲೀಸ್ ಇಲಾಖೆಗೆ ಆಗ್ರಹಿಸಿದ್ದಾರೆ. ಅಲ್ಲದೆ ಮತ್ತೆ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿರುವ ಹಿಂದೂ ಸಂಘಟನೆಗಳು ನಾಳೆ ಅಕ್ಟೋಬರ್ 1 ರಂದು ಗಂಗೊಳ್ಳಿ ಬಂದ್ ಗೆ ಕರೆ ನೀಡಿದ್ದಾರೆ. ಕಸಾಯಿಖಾನೆ, ಗೋಹತ್ಯೆ ಹಾಗೂ ಗಂಗೊಳ್ಳಿ ಪರಿಸರದಲ್ಲಿ ತಲೆ ಎತ್ತಿರುವ ಅಕ್ರಮ ಪ್ರಾರ್ಥನಾ ಮಂದಿರಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿ ನಾಳೆ ಅಕ್ಟೋಬರ್ 1 ರಂದು ಸ್ವಯಂ ಪ್ರೇರಿತ ಗಂಗೊಳ್ಳಿ ಬಂದ್ ಗೆ ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ. ಈ ಹಿನ್ನಲೆ ನಾಳೆ ಗಂಗೊಳ್ಳಿ ಬಂದರಿನಲ್ಲಿ ನಾಳೆ ಮೀನುಗಾರಿಕೆ ಚಟುವಟಿಕೆ ಸ್ಥಗಿತಗೊಳ್ಳಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ರಸ್ತೆಗೆ ಇಳಿದು ಪ್ರತಿಭಟಿಸಲು ನಿರ್ಧರಿಸಿದ್ದಾರೆ.

ಸದ್ಯ ಕಿಡಿಗೇಡಿಗಳ ಕೃತ್ಯದಿಂದಾಗಿ ಗಂಗೊಳ್ಳಿ ಪರಿಸರ ಬೂದಿ ಮುಚ್ಚಿದ ಕೆಂಡದಂತಿದ್ದು, ಗಂಗೊಳ್ಳಿಯ ಪರಿಸ್ಥಿತಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ತೀವ್ರ ತಲೆನೋವಾಗಿ ಪರಿಣಮಿಸಿದೆ.

https://youtu.be/mDis7SYLRj8

Share Information
Continue Reading
Advertisement
Click to comment

Leave a Reply

Your email address will not be published. Required fields are marked *