LATEST NEWS
ಗಂಗೊಳ್ಳಿ – ಕಳ್ಳತನ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ದಂಪತಿ ಅರೆಸ್ಟ್
ಗಂಗೊಳ್ಳಿ, ಜನವರಿ 22: ಕಳ್ಳತನ ನಡೆದ ಕೆಲವೇ ಗಂಟೆಗಳಲ್ಲಿ ಕಳ್ಳತನ ಮಾಡಿದ ದಂಪತಿಗಳನ್ನು ಅರೆಸ್ಟ್ ಮಾಡುವಲ್ಲಿ ಗಂಗೊಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಗುಜ್ಜಾಡಿ ನಿವಾಸಿ ವಿನಾಯಕ (41) ಹಾಗೂ ಆತನ ಪತ್ನಿ ಪ್ರಮೀಳಾ(30) ಎಂದು ಗುರುತಿಸಲಾಗಿದೆ.
ಜನವರಿ 21ರಂದು ಬೆಳಗ್ಗೆ ತ್ರಾಸಿ ಬೀಚ್ ಬಳಿ ಮನೆಯೊಂದರ ಮೇಜಿನ ಮೇಲೆ ಇಟ್ಟಿದ್ದ ಬ್ಯಾಗ್ ನಿಂದ 16 ಗ್ರಾಂ ತೂಕದ ಚಿನ್ನದ ನೆಕ್ಲೇಸ್, 16 ಗ್ರಾಂ ತೂಕದ ಬಳೆ ಹಾಗೂ 3 ಗ್ರಾಂ ತೂಕದ 3 ಚಿನ್ನದ ಉಂಗುರ ಸಹಿತ 2 ಲಕ್ಷದ ಆಭರಣ ಕಳವು ಮಾಡಿದ್ದರು.
ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಗಂಗೊಳ್ಳಿ ಎಸ್ಸೈ ಹರೀಶ್ ಆರ್. ಹಾಗೂ ಸಿಬ್ಬಂದಿ ಶಾಂತರಾಮ, ರಾಜು, ನಾಗರಾಜ, ರಾಘವೇಂದ್ರ, ಸಂದೀಪ ಕುರಣಿ, ಮಾರುತಿ ನಾಯ್ಕ, ದಿನೇಶ್ ಅವರ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮನೆ ಕಳ್ಳತನದ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದು ಜನವರಿ 21 ರಾತ್ರಿ 8 ಗಂಟೆ ಸುಮಾರಿಗೆ ಆರೋಪಿಗಳನ್ನು ಬಂಧಿಸಿದರು. ಬಂಧಿತರಿಂದ 2 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ ಸ್ಕೂಟಿಯನ್ನು ಪೊಲೀಸರು ವಶಪಡಿಸಿ ಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸ ಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.