Connect with us

LATEST NEWS

ಅತ್ಯಾಚಾರದ ವಿಡಿಯೋ ಡಿಲೀಟ್​ ಮಾಡುವುದಾಗಿ ಹೇಳಿ ಬಾಲಕಿ ಮೇಲೆ ಗ್ಯಾಂಗ್​ರೇಪ್​: ಎನ್​ಕೌಂಟರ್​ಗೆ ಆರೋಪಿ ಬಲಿ

ಗುವಾಹಟಿ, ಮಾರ್ಚ್ 17: ಕೆಲವು ದಿನಗಳ ಹಿಂದೆ ಅಸ್ಸಾಂನ ಗುವಾಹಟಿಯಲ್ಲಿ ಭಾರಿ ಸುದ್ದಿ ಮಾಡಿದ್ದ ಗ್ಯಾಂಗ್​ರೇಪ್​ ಪ್ರಕರಣದಲ್ಲಿ, ಆರೋಪಿಯೊಬ್ಬನನ್ನು ಪೊಲೀಸರು ಎನ್​ಕೌಂಟರ್​ ಮಾಡಿದ್ದಾರೆ.

16 ವರ್ಷದ ಬಾಲಕಿಯ ಮೇಲೆ ಬಿಕಿ ಅಲಿ ಹಾಗೂ ಆತನ ನಾಲ್ವರು ಸ್ನೇಹಿತರು ಗ್ಯಾಂಗ್​ರೇಪ್​ ಮಾಡಿದ್ದರು. ಇದರ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು. ವಿಷಯವನ್ನು ತಿಳಿಸಿದರೆ ಅದನ್ನು ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದರು. ನಂತರ ತಮ್ಮ ಜತೆ ಬಂದರೆ ವೀಡಿಯೊ ಡಿಲೀಟ್​ ಮಾಡುವುದಾಗಿ ಭರವಸೆ ನೀಡಿ ಪುನಃ ರೇಪ್​ ಮಾಡಿದ್ದರು.

ಈ ಸಂದರ್ಭದಲ್ಲಿ ತನಿಖೆಗಾಗಿ ಬಿಕಿ ಅಲಿಯನ್ನು ಪೊಲೀಸರು ಕರೆದೊಯ್ಯುತ್ತಿದ್ದರು. ಆಗ ಆತ ಪರಾರಿಯಾಗಲು ಪ್ರಯತ್ನಿಸಿದಾಗ ಪೊಲೀಸರು ಗುಂಡು ಹಾರಿಸಿದ್ದಾರೆ. ಗಾಯಗೊಂಡ ಆತನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

ಗುವಾಹಟಿಯ ಪನ್‌ಬಜಾರ್ ಮಹಿಳಾ ಪೊಲೀಸ್ ಠಾಣೆಯ ಉಸ್ತುವಾರಿ ಪೊಲೀಸ್ ಅಧಿಕಾರಿ ಟ್ವಿಂಕಲ್ ಗೋಸ್ವಾಮಿ ಕೂಡ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಕಾಲು ಮತ್ತು ಕೈಗೆ ಸಣ್ಣಪುಟ್ಟ ಗಾಯಗಳಾಗಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.

ಈ ಕುರಿತು ಮಾತನಾಡಿರುವ ಗುವಾಹಟಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸೂಪರಿಂಟೆಂಡೆಂಟ್ ಅಭಿಜಿತ್ ಶರ್ಮಾ, ಆರೋಪಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಆತನ ಎದೆ ಮತ್ತು ಹಿಂಭಾಗದಲ್ಲಿ ಮೂರು ಗಾಯಗಳಾಗಿದ್ದವು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ ಎಂದಿದ್ದಾರೆ. ಗುಂಡಿನ ಗಾಯಗಳ ವಿವರಗಳು ಮರಣೋತ್ತರ ಪರೀಕ್ಷೆಯ ನಂತರ ಲಭ್ಯವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಭಾರತೀಯ ದಂಡ ಸಂಹಿತೆ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಉಳಿದ ನಾಲ್ವರು ಆರೋಪಿಗಳ ಪತ್ತೆಗೆ ಪ್ರಯತ್ನ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ.

Advertisement
Click to comment

You must be logged in to post a comment Login

Leave a Reply