MANGALORE
ಕಾಲೇಜು ವಿಧ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದವನ ಸೆರೆ

ಕಾಲೇಜು ವಿಧ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದವನ ಸೆರೆ
ಮಂಗಳೂರು ಅಕ್ಟೋಬರ್ 21: ಮಂಗಳೂರು ನಗರದ ನೀರುಮಾರ್ಗ ಪರಿಸರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿದ್ದವನನ್ನು ಗಾಂಜಾದೊಂದಿಗೆ ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೀರುಮಾರ್ಗ ಒಳಬೈಲು ಬಳಿಯ ಕರಾವಳಿ ಇನ್ಸಿಟ್ಯೂಟ್ ಆಫ್ ಟೆಕ್ನೋಲಾಜಿ ಕಾಲೇಜು ಎದುರುಗಡೆ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಮೊಹಮ್ಮದ್ ರಿಯಾಸ್ ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನಿಂದ 250 ಗ್ರಾಂ ಗಾಂಜಾ, ಹಾಗೂ ಬಜಾಜ್ ಪಲ್ಸರ್ ಬೈಕ್ ಹಾಗೂ ಮೊಬೈಲ್ ಫೋನ್ ನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ಸೊತ್ತಿನ ಆಂದಾಜು ಮೌಲ್ಯ ರೂ, 36,000/- ಆಗಿರುತ್ತದೆ. ಈ ಗಾಂಜಾವನ್ನು ಆರೋಪಿಯು ಸಣ್ಣ ಸಣ್ಣ ಪ್ಯಾಕೇಟ್ ಗಳನ್ನಾಗಿ ಮಾಡಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರ ಮಾರಾಟ ಮಾಡುತ್ತಿದ್ದರು. ಆರೋಪಿ ಮೊಹಮ್ಮದ್ ರಿಯಾಸ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣವೊಂದು ದಾಖಲಾಗಿತ್ತು. ಆರೋಪಿಯನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.