LATEST NEWS
ಒರಿಸ್ಸಾದಿಂದ ಮಂಗಳೂರಿಗೆ ಗಾಂಜಾ ತಂದು ಮಾರಾಟಕ್ಕೆ ಯತ್ನ ಇಬ್ಬರು ಅರೆಸ್ಟ್
ಮಂಗಳೂರು ಸೆಪ್ಟೆಂಬರ್ 13: ಒರಿಸ್ಸಾದಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ/ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 8.650 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಬಂಧಿತರನ್ನು ಬುಲುಬಿರೊ(24), ದಿಲ್ ದಾರ್ ಆಲಿ(28) ಎಂದು ಗುರುತಿಸಲಾಗಿದೆ. ಆರೋಪಿಗಳು ಮಂಗಳೂರು ನಗರಕ್ಕೆ ಒರಿಸ್ಸಾದಿಂದ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಖರೀದಿಸಿಕೊಂಡು ಮಂಗಳೂರು ನಗರಕ್ಕೆ ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ಕರ್ನಾಟಕ-ಕೇರಳ ಗಡಿ ಪ್ರದೇಶದ ತಲಪಾಡಿ ದೇವಿಪುರ ರಸ್ತೆಯ ತಚ್ಚಾಣಿ ಪರಿಸರದಲ್ಲಿ ಅಕ್ರಮವಾಗಿ ಗಾಂಜಾ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದವರನ್ನು ಅರೆಸ್ಟ್ ಮಾಡಿದ್ದಾರೆ.
ಆರೋಪಿಗಳಿಂಗ 2,60,000/- ರೂ ಮೌಲ್ಯದ 8 ಕೆಜಿ 650 ಗ್ರಾಂ ನಿಷೇಧಿತ ಮಾದಕ ವಸ್ತು ಗಾಂಜಾ, 2 ಮೊಬೈಲ್ ಫೋನುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 3 ಲಕ್ಷ ಆಗಬಹುದು. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿಗಳು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಒರಿಸ್ಸಾದಿಂದ ಗಾಂಜಾವನ್ನು ಖರೀದಿಸಿಕೊಂಡು ಬೆಂಗಳೂರಿಗೆ ರೈಲಿನಲ್ಲಿ ಬಂದು ಅಲ್ಲಿಂದ ಮಂಗಳೂರಿಗೆ ಬಸ್ಸಿನಲ್ಲಿ ಸಾಗಾಟ ಮಾಡಿಕೊಂಡು ಕರ್ನಾಟಕ, ಕೇರಳ ರಾಜ್ಯದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಇವರು ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿರುವುದಾಗಿದೆ.