Connect with us

BANTWAL

ಗಾಂಜಾ ಸಾಗಾಟಕ್ಕೆ ಯತ್ನ – ಓರ್ವನ ಆರೆಸ್ಟ್

ಬಂಟ್ವಾಳ ಎಪ್ರಿಲ್ 8 : ರಾತ್ರಿ ಸಂದರ್ಭ ವಾಹನ ತಪಾಸಣೆ ವೇಳೆ ಕಾರಿನಲ್ಲಿ ಸಾಗಿಸುತ್ತಿದ್ದ 2 ಕೆಜಿ ಗಾಂಜಾವನ್ನು ಪೊಲೀಸರು ಪತ್ತೆಹಚ್ಚಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.


ಬಂಧಿತನನ್ನು ಮಂಜೇಶ್ವರ ತಾಲೂಕಿನ್ ಅಪಾತೂರು ಕಜೆ ನಿವಾಸಿ ನಾಸಿರ್ ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕು ವಿಟ್ಲ ಪಡೂರು ಗ್ರಮದ ಕೊಡಂಗಾಯಿ ಎಂಬಲ್ಲಿ ವಾಹನ ತಪಾಸಣೆ ನಡೆಸುವ ಸಮಯ 2 ಕೆ.ಜಿ ತೂಕದ 20 ಸಾವಿರ ರೂಪಾಯಿ ಬೆಲೆಬಾಳುವ ಗಾಂಜಾವನ್ನು ಕಾರಿನಲ್ಲಿ ಸಾಗಾಟಕ್ಕೆ ಯತ್ನಿಸಿದ್ದು, ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ.

ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ಬಾಕ್ರಬೈಲಿನ ಬಾರಿಕ್ ಹಾಗೂ ಪಾತೂರಿನ ಮುಸ್ತಾಫ ತಲೆ ಮರೆಸಿಕೊಂಡಿದ್ದು, ಬಂಟ್ವಾಳದ ಪೊಲೀಸ್ ಸರ್ಕಲ್ ಇನ್ ಸ್ಪೆಕ್ಟರ್ ಟಿ.ಡಿ ನಾಗರಾಜ್ ತನಿಖೆ ಮುಂದುವರಿಸಿದ್ದಾರೆ. ಆರೋಪಿಯಿಂದ 2ಲಕ್ಷ ರೂ ಮೌಲ್ಯದ ಆಲ್ಟೋ ಕಾರು, 20 ಸಾವಿರ ರೂ. ಮೌಲ್ಯದ 2 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.