Connect with us

BELTHANGADI

ಸ್ಕೂಟರ್ ನಲ್ಲಿ ಗಾಂಜಾ ಸಾಗಾಟ – ಇಬ್ಬರು ಆರೆಸ್ಟ್

ಬೆಳ್ತಂಗಡಿ : ಸ್ಕೂಟರ್ ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮದ್ದಡ್ಕದ ಚಿಲಿಂಬಿ ನಿವಾಸಿ ಮುಹಮ್ಮದ್ ರಫೀಕ್ (35) ಮತ್ತು ಆಲಂದಿಲ ನಿವಾಸಿ ನೌಫಲ್ (25) ಎಂದು ಪೊಲೀಸರು ತಿಳಿಸಿದ್ದಾರೆ


ಬೆಳ್ತಂಗಡಿ ಎಸ್‌ಐ ನಂದಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯ ಸಬರಬೈಲು ಎಂಬಲ್ಲಿ ಸಂಜೆ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಮದ್ದಡ್ಕ ಕಡೆಯಿಂದ ಬೆಳ್ತಂಗಡಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಇಬ್ಬರು ಯುವಕರು ಬರುತ್ತಿದ್ದಾಗ ವಾಹನ ತಡೆದು ತಪಾಸಣೆ ನಡೆಸಿದ ವೇಳೆ ಗಾಂಜಾ ಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ. ಸ್ಕೂಟರ್‌ನಲ್ಲಿ 1.5 ಕೆ.ಜಿ ಗಾಂಜಾ ಪತ್ತೆಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.