Connect with us

LATEST NEWS

ಮೀನಿನ ಲಾರಿಯಲ್ಲಿ ಗಾಂಜಾ ಸಾಗಾಟ – ಮಂಗಳೂರು ಸಿಸಿಬಿ ಪೊಲೀಸರ ಬೃಹತ್ ಕಾರ್ಯಾಚರಣೆಯಲ್ಲಿ ಸಿಕ್ಕಿ ಬಿದ್ದ ಕಳ್ಳರು

ಮಂಗಳೂರು ಫೆಬ್ರವರಿ 18:ಆಂಧ್ರ ಪ್ರದೇಶದಿಂದ ಮಂಗಳೂರು ಹಾಗೂ ಕೇರಳಕ್ಕೆ 119 ಕೆಜಿ ಗಾಂಜಾ ಸಾಗಿಸಲು ಯತ್ನಿಸುತ್ತಿದ್ದ ತಂಡವನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದು, 119 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಕಾಸರಗೋಡು ಜಿಲ್ಲೆ ನಿವಾಸಿ ಮೊಯ್ದಿನ್ ಶಬ್ಬಿರ್ (38), ಆಂದ್ರಪ್ರದೇಶ ನಿವಾಸಿ ಮಹೇಶ್ ದ್ವಾರಿಕಾನಾಥ ಪಾಂಡೆ(30), ಕೇರಳ ರಾಜ್ಯದ ಅಜಯ್ ಕೃಷ್ಣ(33), ಹರಿಯಾಣ ರಾಜ್ಯದ ಜೀವನ್ ಸಿಂಗ್(35) ಎಂದು ಗುರುತಿಸಲಾಗಿದೆ.


ಆರೋಪಿಗಳು 17-02-2025 ರಂದು ಮಂಗಳೂರು ನಗರಕ್ಕೆ ಅಂಧ್ರಪ್ರದೇಶ ರಾಜ್ಯದಿಂದ ಟಾಟಾ 407 ಗೂಡ್ಸ್‌ ಟೆಂಪೋ ವಾಹನದಲ್ಲಿ ಹಾಗೂ ಮಾರುತಿ ಅಲ್ಲೋ ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ಕುರ್ನಾಡು ಗ್ರಾಮದ ಮಿತ್ತಕೋಡಿ ಎಂಬಲ್ಲಿ 2 ವಾಹನಗಳನ್ನು ಪತ್ತೆ ಹಚ್ಚಿ ವಾಹನದಲ್ಲಿ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದನ್ನು ಪತ್ತೆ ಮಾಡಿದ್ದಾರೆ. ಬಂಧಿತರಿಂದ 35 ಲಕ್ಷ ಮೌಲ್ಯದ 119 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.


ಆರೋಪಿಗಳ ಪೈಕಿ ಮೊಯಿದ್ದೀನ್ ಶಬ್ಬಿರ್ ಎಂಬಾತನ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು ಜಿಲ್ಲೆಯ ಕಾಸರಗೋಡು, ಮಂಜೇಶ್ವರ, ಕುಂಬ್ಳೆ, ವಿದ್ಯಾನಗರ ಪೊಲೀಸ್ ಠಾಣೆಗಳಲ್ಲಿ ದನಕಳ್ಳತನ, ಹಲ್ಲೆ, ಕೊಲೆ ಹೀಗೆ ಒಟ್ಟು 12 ಪ್ರಕರಣ ದಾಖಲಾಗಿರುತ್ತದೆ. ಅಲ್ಲದೇ ಆಂಧ್ರಪ್ರದೇಶದಲ್ಲಿ ಗಾಂಜಾ ಸಾಗಾಟಕ್ಕೆ ಸಂಬಂಧಿಸಿದಂತೆ ಪ್ರಕರಣವೊಂದು ದಾಖಲಾಗಿರುತ್ತದೆ. ಈತನನ್ನು 2023 ನೇ ಇಸವಿಯಲ್ಲಿ ಸಿಸಿಬಿ ಪೊಲೀಸರ ತಂಡ ದಸ್ತಗಿರಿ ಮಾಡಿ ಆತನ ವರದಿಂದ 23.250 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿತ್ತು. ಈತನು ಸುಮಾರು ಒಂದೂವರೆ ವರ್ಷ ಜೈಲ್ ನಲ್ಲಿದ್ದು, ಸುಮಾರು 6 ತಿಂಗಳ ಹಿಂದೆ ಜಾಮೀನಿನಲ್ಲಿ ಬಿಡುಗಡೆಗೊಂಡವನು ಪುನಃ ಅದೇ ಗಾಂಜಾ ಸಾಗಾಟ ಕೃತ್ಯದಲ್ಲಿ ಭಾಗಿಯಾಗಿರುತ್ತಾನೆ.

ಇನ್ನೋರ್ವ ಆರೋಪಿ ಮಹೇಶ್ ದ್ವಾರಿಕಾನಾಥ ಪಾಂಡೆ ಎಂಬಾತನ ವಿರುದ್ಧ ಆಂಧ್ರಪ್ರದೇಶದ ರಾಜಮಂಡ್ರಿ ಎಂಬಲ್ಲಿ 2 ಗಾಂಜಾ ಸಾಗಾಟ ಪ್ರಕರಣ ದಾಖಲಾಗಿರುತ್ತದೆ. ಅಜಯ್ ಕೃಷ್ಣನ್ ಎಂಬಾತನ ವಿರುದ್ಧ ಅಲಪ್ಪುಳಂ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದರೋಡೆ, ಹಲ್ಲೆ, ಗಾಂಜಾ ಮಾರಾಟ, ಹಾಗೂ ನಕಲಿ ಚಿನ್ನವನ್ನು ಬ್ಯಾಂಕ್ ನಲ್ಲ ಅಡವಿರಿಸಿ ವಂಚನೆ ಮಾಡಿರುವ ಹೀಗೆ ಒಟ್ಟು 6 ಪ್ರಕರಣಗಳು ದಾಖಲಾಗಿರುತ್ತದೆ. ಆರೋಪಿ ಜೀವನ್ ಸಿಂಗ್ ಎಂಬಾತನ ವಿರುದ್ಧ ಅಂಧ್ರಪ್ರದೇಶದ ಮೊತುಕುಡಮ್ ಪೊಲೀಸ್ ಠಾಣೆಯಲ್ಲಿ ಗಾಂಜಾ ಸಾಗಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣವೊಂದು ದಾಖಲಾಗಿರುತ್ತದೆ. ಆರೋಪಿಗಳು ಕರ್ನಾಟಕ, ಕೇರಳ ಸಾರ್ವಜನಿಕರಿಗೆ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡಿ ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಆಂಧ್ರಪ್ರದೇಶದಿಂದ ಗಾಂಜಾವನ್ನು ಖರೀದಿಸಿಕೊಂಡು ಮಂಗಳೂರು ನಗರಕ್ಕೆ ಹಾಗೂ ಕೇರಳಕ್ಕೆ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದರು. ಈ ಬೃಹತ್ ಗಾಂಜಾ ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *