Connect with us

    LATEST NEWS

    2 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ವಶ ಒರ್ವನ ಬಂಧನ

    2 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ವಶ ಒರ್ವನ ಬಂಧನ

    ಮಂಗಳೂರು ಜುಲೈ 30: ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯೊರ್ವನನ್ನು ಬಂಧಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಪರಾಧ ಪತ್ತೆದಳದ ಪೊಲೀಸರು ಯಶಸ್ವಿಯಾಗಿದ್ದಾರೆ.

    ಬಂಧಿತನನ್ನು ಬಂಟ್ವಾಳದ ಗೋಳ್ತಮಜಲು ಗ್ರಾಮ ನಿವಾಸಿ ಮಹಮ್ಮದ್‌ ಆಲೀಂ (36) ಎಂದು ಗುರುತಿಸಲಾಗಿದೆ.

    ಬಂಧಿತ ಆರೋಪಿ ಮಾಣಿ ಕಡೆಯಿಂದ ಬಂಟ್ವಾಳ ಕಡೆಗೆ ಓಮಿನಿ ವಾಹನದಲ್ಲಿ ಅಕ್ರಮವಾಗಿ ಗಾಂಜಾ ವನ್ನು ಸಾಗಿಸುತ್ತಿದ್ದ ಎಂದು ಹೇಳಲಾಗಿದೆ.

    ಈ ಹಿನ್ನೆಲೆಯಲ್ಲಿ ಮೇಲ್ಕಾರ್‌ ಬಳಿ ವಾಹನ ತಪಾಸಣೆ ಮಾಡುತ್ತಿದ್ದ ಸಂದರ್ಭ ಕಲ್ಲಡ್ಕ ಕಡೆಯಿಂದ ಬಿಸಿರೋಡ್‌ ಕಡೆಗೆ ಬರುತ್ತಿದ್ದ ಓಮಿನಿ ಕಾರನ್ನು ನಿಲ್ಲಿಸಲು ಸೂಚಿಸಿದ್ದಾರೆ. ಆದರೆ ಕಾರನ್ನು ಸ್ವಲ್ಪ ದೂರದಲ್ಲಿ ನಿಲ್ಲಿಸಿ ಕಾರಲ್ಲಿ ವ್ಯಕ್ತಿ ಪರಾರಿಯಾಗಲು ಯತ್ನಿಸಿದ್ದಾನೆ.

    ಪರಾರಿಯಾಗಲು ತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು ವಾಹನ ತಪಾಸಣೆ ನಡೆಸಿದಾಗ ವಾಹನದಲ್ಲಿ 2.10 ಕಿಲೋ ಗಾಂಜಾ ಪತ್ತೆಯಾಗಿದೆ. ವಶಪಡಿಸಿ ಕೊಂಡಿರುವ ಗಾಂಜಾ ದ ಮೌಲ್ಯ 2 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply