LATEST NEWS
ಉಡುಪಿ – 49 ಕೆಜಿ ಗಾಂಜಾ ವಶಪಡಿಸಿಕೊಂಡ ಪೊಲೀಸರು

ಉಡುಪಿ ಅಗಸ್ಟ್ 22:ಉಡುಪಿಯಲ್ಲಿ ಇತ್ತೀಚೆಗೆ ಕೆಲ ದಿನಗಳಿಂದ ಗಾಂಜಾ ಪ್ರಕರಣಗಳು ಹೆಚ್ಚಾಗಿ ಕಾಣಿಸುತ್ತಿದೆ. ಇಂದು ಪೊಲೀಸರು ಬರೋಬ್ಬರಿ 49 ಕೆಜಿ ಗಾಂಜಾವನ್ನು ವಶ ಪಡಿಸಿಕೊಂಡಿದ್ದಾರೆ.
ಬ್ರಹ್ಮಾವರ ತಾಲೂಕು ಹೇರೂರು ಗ್ರಾಮದ ಬಳಿ ಡಿಸಿಐಬಿ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದ ಸಂದರ್ಭ ಉತ್ತರಪ್ರದೇಶ ರಿಜಿಸ್ಟ್ರೇಷನ್ ಲಾರಿ ಬಂದಿದ್ದು, ಪೊಲೀಸರು ಕಂಟೇನರ್ ಲಾರಿ ತಪಾಸಣೆ ನಡೆಸಿದ ಸಂದರ್ಭದಲ್ಲಿ ಬಿದಿರಿನ ಕೋಲುಗಳು ಸಿಕ್ಕಿದೆ. ಕಂಟೇನರ್ ನಲ್ಲಿ ಬಿದಿರಾ ಅಂತ ಸಂಶಯಗೊಂಡ ಪೊಲೀಸರು ಚಾಲಕ ಮತ್ತು ನಿರ್ವಾಹಕರ ವಿಚಾರಣೆ ನಡೆಸಿದಾಗ ಇಬ್ಬರು ತಬ್ಬಿಬ್ಬಾಗಿದ್ದಾರೆ. ಬಳಿಕ ಕಂಟೇನರ್ ಅನ್ನು ಪರಿಶೀಲನೆ ನಡೆಸಿದ್ದಾರೆ. ಕೆಲ ಬಿದಿರು ಕೋಲುಗಳನ್ನು ಓಪನ್ ಮಾಡಿ ನೋಡಿದಾಗ ಗಾಂಜಾದ ಪ್ಯಾಕೆಟ್ ಗಳು ಸಿಕ್ಕಿದೆ. ಕಂಟೇನರ್ ನಲ್ಲಿ 49 ಕೆಜಿ ಎಷ್ಟು ಗಾಂಜಾ ಸಿಕ್ಕಿದೆ ಎನ್ನಲಾಗಿದೆ

ಲಾರಿ ಚಾಲಕ, ನಿರ್ವಾಹಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಂಟೇನರ್ ಸೀಜ್ ಮಾಡಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಗಾಂಜಾ ವಹಿವಾಟು ನಡೆಯುತ್ತದೆ ಎಂಬುದು ಜಗಜ್ಜಾಹೀರು.