Connect with us

    LATEST NEWS

    ಲಿಂಬೆ ಹಣ್ಣಿನ ಜೊತೆ 40 ಕೆಜಿ ಗಾಂಜಾ ಸಾಗಾಟಕ್ಕೆ ಯತ್ನ- ಇಬ್ಬರು ಆರೆಸ್ಟ್

    ಮಂಗಳೂರು ಜುಲೈ 03: ಲಿಂಬೆ ಹಣ್ಣುಗಳ ಜತೆ 40 ಕೆಜಿ ಗಾಂಜಾ ಸಾಗಿಸುತ್ತಿದ್ದ ವಾಹನವನ್ನು ಉರ್ವ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡಿನ ಶಿಹಾಬುದ್ದೀನ್ (32), ಲತೀಫ್ (38) ಎಂದು ಗುರುತಿಸಲಾಗಿದೆ.


    ಈ ಬಗ್ಗೆ ಮಾಹಿತಿ ನೀಡಿರುವ ಡಿಸಿಪಿ ಹರಿರಾಂ ಶಂಕರ್ ಆರೋಪಿಗಳು ಗಾಂಜಾವನ್ನು ಆಂಧ್ರ ಪ್ರದೇಶದಿಂದ ಕೇರಳಕ್ಕೆ ಸಾಗಾಟ ಮಾಡಲು ಯತ್ನಿಸುತ್ತಿದ್ದರು. ನಿನ್ನೆ ರಾತ್ರಿ 8 ಗಂಟೆಯ ವೇಳೆಗೆ ಉಡುಪಿ ಕಂಡೆ ಯಿಂದ ಕೇರಳಕ್ಕೆ ತೆರಳುತ್ತಿದ್ದ ಬೊಲೆರೋ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಅದರಲ್ಲಿ ನಿಂಬೆ ಹಣ್ಣಿನ ಟ್ರೇಗಳ ಜತೆ ಈ ಗಾಂಜಾ ಕಂಡು ಬಂದಿದ್ದು, ಆರೋಪಿಗಳನ್ನು ಬಂಧಿಸಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.


    ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಮುಂದುವರಿದಿದ್ದು, ಇನ್ನಷ್ಟು ಮಂದಿ ಈ ಪ್ರಕರಣದಲ್ಲಿ ಭಾಗಿಯಾಗಿರುವ ಸಾಧ್ಯತೆ ಇದೆ. ಕಾಸರಗೋಡು ಹಾಗೂ ಮಂಗಳೂರು ನಗರ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಪೂರೈಕೆಗಾಗಿ ಈ ಮಾದಕ ದ್ರವ್ಯಗಳನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಆಂಧ್ರ ಪ್ರದೇಶದಿಂದ ಈ ಮಾದಕ ದ್ರವ್ಯವನ್ನು ತರಿಸಲಾಗಿದೆ ಎಂದು ಅವರು ಹೇಳಿದರು.

    Share Information
    Advertisement
    Click to comment

    You must be logged in to post a comment Login

    Leave a Reply