LATEST NEWS
ಮಗನ ಸಾವಿನ ಸುದ್ದಿ ಕೇಳಿ…ಆಘಾತದಿಂದ ಆತನ ತಂದೆಯೂ ನಿಧನ!

ಮಹಾರಾಷ್ಟ್ರ ಅಕ್ಟೋಬರ್ 03: ನವರಾತ್ರಿ ಸಂದರ್ಭ ನಡೆದ ಸಮಾರಂಭದಲ್ಲಿ ಗರ್ಬಾ ನೃತ್ಯ ಮಾಡುತ್ತಿರುವಾಗ ಯುವಕನೊಬ್ಬ ಕುಸಿದು ಬಿದ್ದು ಸಾವನಪ್ಪಿದ್ದು, ಈ ಸುದ್ದಿ ಕೇಳಿ ಯುವಕನ ತಂದೆಯೂ ನಿಧನ ಹೊಂದಿದ ಹೃದಯ ವಿದ್ರಾವಕ ಘಟನೆ ನಡೆದಿದೆ.

ಸಾಂದರ್ಭಿಕ ಚಿತ್ರ
ಪಾಲ್ಘರ್ ಜಿಲ್ಲೆಯ ವಿರಾರ್ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಗ್ಲೋಬಲ್ ಸಿಟಿ ಕಾಂಪ್ಲೆಕ್ಸ್‌ನಲ್ಲಿ ಭಾನುವಾರ ರಾತ್ರಿ ಗರ್ಬಾ ನೃತ್ಯ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. 35 ವರ್ಷದ ಮನೀಷ್ ಸೋನಿಗ್ರಾ ಎಂಬ ಯುವಕ ಕೂಡ ಗರ್ಬಾ ನೃತ್ಯ ಮಾಡುತ್ತಿದ್ದರು. ನೃತ್ಯ ಮಾಡುವಾಗಲೇ ಮನೀಷ್ ಕುಸಿದು ಬಿದ್ದು ಮೃತಪಟ್ಟಿದ್ದರು. ಮಗನ ಸಾವಿನ ಸುದ್ದಿ ಕೇಳಿ, ತಂದೆ ನಾರಾಪ್ಜಿ ಸೋನಿಗ್ರಾ ಆಘಾತಗೊಂಡು ತೀವ್ರ ಅಸ್ವಸ್ಥರಾಗಿದ್ದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಮೃತಪಟ್ಟರು. ಅವರಿಗೆ 66 ವರ್ಷ ವಯಸ್ಸಾಗಿತ್ತು. ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
