Connect with us

    LATEST NEWS

    ಜನವರಿ 30 ರಂದು ಬ್ರಹ್ಮಾವರ ತಾಲೂಕಿನ ನೆಂಚಾರು ಮತ್ತು ನಾಲ್ಕೂರಿನಲ್ಲಿ ಗ್ರಾಮ ವಾಸ್ತವ್ಯ ಪೈಲಟ್ ಕಾರ್ಯಕ್ರಮ : ಸದಾಶಿವ ಪ್ರಭು

    ಉಡುಪಿ, ಜನವರಿ 27 : ಜನವರಿ 30 ರಂದು ಬ್ರಹ್ಮಾವರ ತಾಲೂಕಿನ ನೆಂಚಾರು ಮತ್ತು ನಾಲ್ಕೂರು ಗ್ರಾಮಗಳಿಗೆ ಜಿಲ್ಲಾಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು ಭೇಟಿ ನೀಡಿ, ವಾಸ್ತವ್ಯ ಮಾಡಿ, ಸದ್ರಿ ಗ್ರಾಮಗಳಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ಸ್ಥಳದಲ್ಲೇ ಪರಿಹಾರ ಒದಗಿಸಲಿದ್ದಾರೆ, ಇಡೀ ರಾಜ್ಯದಲ್ಲಿ ಇದು ಪ್ರಥಮ ಪೈಲಟ್ ಕಾರ್ಯಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹೇಳಿದರು.


    ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಗ್ರಾಮ ವಾಸ್ತವ್ಯ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು, ಜಿಲ್ಲೆಯ ಎಲ್ಲಾ ತಹಸೀಲ್ದಾರ್‌ಗಳು ಮತ್ತು ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಜನವರಿ 30 ರಂದು ಗ್ರಾಮ ವಾಸ್ತವ್ಯ ನಡೆಯುವ ನೆಂಚಾರು ಮತ್ತು ನಾಲ್ಕೂರು ಗ್ರಾಮಗಳ ಸಾರ್ವಜನಿಕರ ಕುಂದು ಕೊರತೆಗಳ ಕುರಿತಂತೆ ಸಂಬಂದಪಟ್ಟ ಕಂದಾಯ ಇಲಾಖೆಯ ಅಧಿಕಾರಿಗಳು 3 ದಿನಗಳ ಮುಂಚಿತವಾಗಿಯೇ ಅರ್ಜಿಗಳನ್ನು ಸ್ವೀಕರಿಸಿ, ಅಗತ್ಯ ಕ್ರಮ ಕೈಗೊಳ್ಳಿ. ಸದ್ರಿ ಗ್ರಾಮ ವಾಸ್ತವ್ಯದ ದಿನ ಫಲಾನುಭವಿಗಳಿಗೆ ಅರ್ಜಿಗೆ ಸಂಬಂಧಿಸಿಂತೆ ಸೂಕ್ತ ಸೌಲಭ್ಯ ಒದಗಿಸುವ ಕುರಿತು ಕ್ರಮ ಕೈಗೊಳ್ಳಿ. ಸಂಬಂದಪಟ್ಟ ತಾಲೂಕಿನ ತಹಸೀಲ್ದಾರ್‌ಗಳು, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಎಲ್ಲಾ ಅಧಿಕಾರಿಗಳು ವಾಸ್ತವ್ಯ ಕಾರ್ಯಕ್ರಮದಲ್ಲಿ ಹಾಜರಿರುವಂತೆ ಅಪರ ಜಿಲ್ಲಾಧಿಕಾರಿ ಸೂಚಿಸಿದರು.


    ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಸಂಬಂದಪಟ್ಟ ಗ್ರಾಮದ ಪಿಡಿಓಗಳು ಮತ್ತು ಪಂಚಾಯತ್‌ಗಳ ಆಡಳಿತಾಧಿಕಾರಿಗಳು, ಕಂದಾಯ ಸಿಬ್ಬಂದಿ ಕಡ್ಡಾಯವಾಗಿ ಸ್ಥಳದಲ್ಲಿ ಹಾಜರಿರಬೇಕು. ಸಾರ್ವಜನಿಕರು ತಮ್ಮ ಕುಟುಂಬದ ವ್ಯಕ್ತಿ ಮರಣ ಹೊಂದಿದ್ದಲ್ಲಿ ಸಂಬಂದಪಟ್ಟ ಇಲಾಖೆಯಿಂದ ಮರಣ ಪ್ರಮಾಣ ಪತ್ರ ಪಡೆದು, ಪೌತಿ ಖಾತೆ ಬದಲಾವಣೆ ಮಾಡಿಕೊಳ್ಳಬೇಕು. ಸಾಮಾಜಿಕ ಭದ್ರತಾ ಯೋಜನೆಯಗಳಡಿಯಲ್ಲಿ ಪಿಂಚಣಿ ಪಡೆಯುತ್ತಿದ್ದ ವ್ಯಕ್ತಿ ಮೃತಪಟ್ಟಲ್ಲಿ ಕೂಡಲೇ ಮಾಹಿತಿ ನೀಡಿ, ಅನವಶ್ಯಕವಾಗಿ ಪಿಂಚಣಿ ಹಣ ಅನರ್ಹರಿಗೆ ತಲುಪಿ ದುರುಪಯೋಗವಾಗದಂತೆ ಎಚ್ಚರವಹಿಸಬೇಕು, ಇಲ್ಲವಾದಲ್ಲಿ ಮೃತರ ಹೆಸರಿನಲ್ಲಿ ಪಿಂಚಣಿ ಪಡೆದವರಿಂದಲೇ ಮೊತ್ತವನ್ನು ವಸೂಲಿ ಮಾಡಲಾಗುವುದು ಮತ್ತು ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಚ್ಚರಿಸಿದರು.
    ಪ್ರತೀ ತಿಂಗಳ 3 ನೇ ಶನಿವಾರ ಜಿಲ್ಲಾಧಿಕಾರಿಗಳು, ಭೂ ದಾಖಲೆಗಳ ಉಪ ನಿರ್ದೇಶಕರು, ಭೂ ದಾಖಲೆಗಳ ಸಹಾಯಕ ನಿರ್ದೇಶಕರು, ಉಪ ವಿಭಾಗದ ಸಹಾಯಕ ಆಯುಕ್ತರು, ಸಂಬಂದಪಟ್ಟ ತಹಸೀಲ್ದಾರ್ ಮತ್ತು ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಿಗರೊಂದಿಗೆ ಗ್ರಾಮ ವಾಸ್ತವ್ಯ ನಡೆಯಲಿದ್ದು, ಜಿಲ್ಲಾಧಿಕಾರಿ ಭೇಟಿ ನೀಡುವ ತಾಲೂಕಿನ ತಹಸೀಲ್ದಾರ್ ಹೊರತುಪಡಿಸಿ, ಉಳಿದ ತಾಲೂಕುಗಳ ತಹಸೀಲ್ದಾರ್‌ಗಳು ತಮ್ಮ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮ ವಾಸ್ತವ್ಯ ಮಾಡಲಿದ್ದು, ಬೆಳಗ್ಗೆ 10 ರಿಂದ 5 ಗಂಟೆಯವರೆಗೆ ವಾಸ್ತವ್ಯ ಮಾಡಲಿದ್ದಾರೆ ಎಂದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *