DAKSHINA KANNADA
ನೆಲ್ಯಾಡಿಯಲ್ಲಿ ಗ್ಯಾಸ್ ಮತ್ತು ಡೀಸೆಲ್ ಟ್ಯಾಂಕರ್ ಅಪಘಾತ : ತಪ್ಪಿದ ಭಾರಿ ದುರಂತ
ನೆಲ್ಯಾಡಿ, ಫೆಬ್ರವರಿ 27: ನೆಲ್ಯಾಡಿಯ ಹೊಸಮಜಲು ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಮತ್ತು ಡಿಕ್ಕಿ ಹೊಡೆದ ಘಟನೆ ಇಂದು ಮುಂಜಾನೆ ನಡೆದಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಹಾಗು ಕೋಲಾರದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಡೀಸೆಲ್ ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಚಾಲಕರಿಬ್ಬರೂ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಅದೃಷ್ಟವಶಾತ್ ಗ್ಯಾಸ್ ಸೋರಿಕೆ ಆಗದೆ ಇರುವುದರಿಂದ ಭಾರಿ ದೊಡ್ಡ ದುರಂತ ತಪ್ಪಿದಂತಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದೆ.
You must be logged in to post a comment Login