Connect with us

    LATEST NEWS

    ಬೆಳಗಾವಿ ಅಪಾರ್ಟ್ ಮೆಂಟ್ ನಲ್ಲಿ ಸಿಲಿಂಡರ್ ಸ್ಪೋಟ – ಉಡುಪಿ ಮೂಲದ ಇಬ್ಬರ ಬಲಿ

    ಬೆಳಗಾವಿ ಜನವರಿ 29 : ಅಪಾರ್ಟ್ ಮೆಂಟ್ ನಲ್ಲಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಉಡುಪಿ ಮೂಲದ ಇಬ್ಬರು ಸಾವನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ನಗರದ ಬಸವನಗಲ್ಲಿಯ ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ.
    ಮೃತರನ್ನು ಉಡುಪಿ ಮೂಲದ ಕಾಮಾಕ್ಷಿ ಭಟ್ (80), ಹೇಮಂತ್ ಭಟ್ (27) ಎಂದು ಮೃತ ದುರ್ದೈವಿಗಳು.


    ಅಪಾರ್ಟ್​ಮೆಂಟ್ ಮನೆಯಲ್ಲಿ ಗ್ಯಾಸ್ ಒಲೆ ಹೊತ್ತಿಸುವಾಗ ಅವಘಡ ಸಂಭವಿಸಿತ್ತು. ಲೈಟರ್ ಆನ್ ಮಾಡುತ್ತಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿತ್ತು. ಘಟನೆಯಲ್ಲಿ‌ ಭಟ್ ಕುಟುಂಬದ ಐವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಗಾಯಾಳುಗಳನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಘಟನೆಯಲ್ಲಿ ಗಾಯಗೊಂಡಿದ್ದ ಐವರ ಪೈಕಿ ಇಬ್ಬರು ಸಾವನ್ನಪ್ಪಿದ್ದು, ಇನ್ನೂ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply