Connect with us

LATEST NEWS

ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ ಪಲ್ಟಿ…!!

ಉಡುಪಿ ಫೆಬ್ರವರಿ 4: ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳ ವಿಜಯಾ ಬ್ಯಾಂಕ್ ಬಳಿಯಲ್ಲಿ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿಯೊಂದು ಮಗುಚಿ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ.


ಖಾಲಿ ಗ್ಯಾಸ್ ಸಿಲಿಂಡರ್ ಗಳನ್ನು ಹೊತ್ತು ಮಂಗಳೂರಿನತ್ತ ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಡಿವೈಡರ್ ಗೆ ಢಿಕ್ಕಿ ಹೊಡೆದಿದ್ದು, ಬಳಿಕ ಹೆದ್ದಾರಿಯಲ್ಲಿ ಮಗುಚಿ ಬಿದ್ದಿದೆ.


ಗ್ಯಾಸ್ ಸಿಲಿಂಡರ್ ಗಳು ರಸ್ತೆಯುದ್ದಕ್ಕೂ ಚೆಲ್ಲಾ ಪಿಲ್ಲಿಯಾಗಿ ಬಿದ್ದಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ.