KARNATAKA
ಗ್ಯಾಸ್ ಗೀಸರ್ ನಿಂದ ಅನಿಲ ಸೊರಿಕೆ- ಉಸಿರುಗಟ್ಟಿ ತಾಯಿ ಮಗಳ ಸಾವು
ಬೆಂಗಳೂರು ಜನವರಿ 16: ಗ್ಯಾಸ್ ಗೀಸರ್ ನಿಂದ ಅನಿಲ ಸೊರಿಕೆಯಿಂದಾಗಿ ಸ್ನಾನಕ್ಕೆ ತೆರಳಿದ್ದ ತಾಯಿಮಗಳು ಸಾವನಪ್ಪಿರುವ ಘಟನೆ ಬೆಂಗಳೂರಿನ ಚಿಕ್ಕಬಾಣಾವರದ ಮನೆಯೊಂದರ ನಡೆಯಲಿದೆ.
ಮೃತರನ್ನು ಸ್ಥಳೀಯ ನಿವಾಸಿ ಮಂಗಳಾ(35) ಹಾಗೂ ಅವರ ಮಗು ಗೌತಮಿ (7) ಮೃತರು. ರಾಮನಗರದ ಮಂಗಳಾ, ಪತಿ ನರಸಿಂಹಮೂರ್ತಿ ಜೊತೆ ಹಲವು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು. ಚಿಕ್ಕಬಾಣಾವರದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ನರಸಿಂಹಮೂರ್ತಿ ಅವರು ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.
ತಮ್ಮ ಮಗಳು ಗೌತಮಿಗೆ ಸ್ನಾನ ಮಾಡಿಸಲು ಮಂಗಳಾ ಹೋಗಿದ್ದರು. ಗ್ಯಾಸ್ ಗೀಸರ್ ಆನ್ ಮಾಡಿ ಬೀಸಿನೀರಿನಿಂದ ಸ್ನಾನ ಮಾಡಿಸುತ್ತಿದ್ದರು. ಇದೇ ಸಂದರ್ಭದಲ್ಲೇ ಗೀಸರ್ನಿಂದ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿ, ಇಡೀ ಕೊಠಡಿ ಆವರಿಸಿತ್ತು. ಉಸಿರಾಡಲು ಸಾಧ್ಯವಾಗದೇ ತಾಯಿ–ಮಗಳು ಪ್ರಜ್ಞೆ ತಪ್ಪಿ ಬಿದ್ದಿದ್ದರು. ಆಗಾಗ ಮನೆಯಿಂದ ಹೊರಗೆ ಬರುತ್ತಿದ್ದ ಮಂಗಳಾ, ಸಂಜೆಯಾದರೂ ಮನೆಯಿಂದ ಹೊರಗೆ ಬಂದಿರಲಿಲ್ಲ. ಏನಾಯಿತೆಂದು ಕೇಳಲು ಮಾಲೀಕರು ಮನೆಯೊಳಗೆ ಹೋಗಿದ್ದಾಗಲೇ ವಿಷಯ ಗೊತ್ತಾಗಿದೆ.
You must be logged in to post a comment Login