DAKSHINA KANNADA
ಉಪ್ಪಿನಂಗಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ಬೆಂಕಿ ಉರಿಸದಂತೆ ಸೂಚನೆ

ಉಪ್ಪಿನಂಗಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ಬೆಂಕಿ ಉರಿಸದಂತೆ ಸೂಚನೆ
ಪುತ್ತೂರು ಡಿಸೆಂಬರ್ 2: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಗ್ಯಾಸ್ ಸೋರಿಕೆಯಾಗಿ ಆತಂಕ ಸೃಷ್ಟಿಸಿದೆ.
ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು, ಗ್ಯಾಸ್ ಸೋರಿಕೆಯಾದ ಪರಿಣಾಮ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿಯ ಬೆದ್ರೋಡಿ ಎಂಬಲ್ಲಿ ರಸ್ತೆ ತಿರುವಿನಲ್ಲಿ ಘಟನೆ ನಡೆದಿದ್ದು, ಎರಡು ಕಿಮೀ ಆಸುಪಾಸಿನಲ್ಲಿ ಬೆಂಕಿ ಹಚ್ಚದಂತೆ ಸೂಚನೆ ನೀಡಲಾಗಿದೆ. ಸ್ಥಳದಲ್ಲಿ ಮೊಬೈಲ್ ಬಳಕೆಯನ್ನೂ ನಿಷೇಧಿಸಲಾಗಿದೆ.
ಗ್ಯಾಸ್ ಸೋರಿಕೆ ತಡೆಯುವಲ್ಲಿ ಅಗ್ನಿಶಾಮಕ ದಳ ಮತ್ತು ಪೊಲೀಸರು ಹರಸಾಹಸ ನಡೆಸುತ್ತಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದ್ದು ಸಂಚಾರಕ್ಕೆ ಪರ್ಯಾಯ ರಸ್ತೆ ಸೂಚಿಸಲಾಗಿದೆ. ಗ್ಯಾಸ್ ಟ್ಯಾಂಕರ್, ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ನಸುಕಿನ ನಾಲ್ಕು ಗಂಟೆ ವೇಳೆಗೆ ರಸ್ತೆಗಡ್ಡವಾಗಿ ಪಲ್ಟಿಯಾಗಿದೆ.